ಬೆಂಗಳೂರು, ಡಿ.18: ಕೇಂದ್ರ ಸೇವೆಯಿಂದ ಮರಳಿದ ಹಿರಿಯ ಅಧಿಕಾರಿ ಬಿಜಯ್ ಕುಮಾರ್ ಸಿಂಗ್ (B.K.Singh) ಅವರನ್ನು ಸಿಐಡಿ (CID) ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖಾ ತಂಡ ಎಸ್ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿಗೆ ಒಪ್ಪಿಸಿ 2019ರಲ್ಲಿ ಆದೇಶಿಸಿತ್ತು. ಬಿಜಯ್ ಸಿಂಗ್ ನೇತೃತ್ವದಲ್ಲಿ 21 ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ಎಲ್ಲಾ ಅಧಿಕಾರಿಗಳು ಹೊಂದಿದ್ದ ಪದವಿ, ಜವಾಬ್ದಾರಿಗಳಿಂದ ವಿಮುಕ್ತಿಗೊಳಿಸಲಾಗಿತ್ತು.
ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ
ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್ಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಡೀ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಮೊದಲ ಆರೋಪಿ ಈತನಾಗಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ