ಬೆಂಗಳೂರು ಸೇರಿ ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಪುನಾರಂಭ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭಗೊಂಡಿದೆ. ಓಲಾ ಹೊರತುಪಡಿಸಿ ಉಬರ್ ಮತ್ತು ರ್ಯಾಪಿಡೋ ಆ್ಯಪ್​ಗಳಲ್ಲಿ ಮಾತ್ರ ಸೇವೆ ಲಭ್ಯವಿದೆ. ಸುರಕ್ಷತಾ ಕಾರಣಗಳಿಂದ ಜೂನ್ 16 ರಿಂದ ನಿಲ್ಲಿಸಲಾಗಿದ್ದ ಸೇವೆಯನ್ನು ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಪುನರಾರಂಭಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಪುನಾರಂಭ
ಬೈಕ್​ ಟ್ಯಾಕ್ಸಿ ಸೇವೆ

Updated on: Aug 21, 2025 | 2:16 PM

ಬೆಂಗಳೂರು, ಆಗಸ್ಟ್​ 21: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ (Karnataka) ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ (Bike taxi services) ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್​ಗಳಿಗೆ ದುಬಾರಿ ಹಣ ಪಾವತಿಸುತ್ತಿದ್ದ ಜನರಿಗೆ ಸ್ವಲ್ಪ ರಿಲೀಫ್ ಸಿಗಲಿದೆ.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್‌ ಟ್ಯಾಕ್ಸಿಗಳ ಮೇಲೆ ಆರ್‌ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು.

ಬೈಕ್ ಟ್ಯಾಕ್ಸಿಗೆ ನೀತಿ ಚೌಕಟ್ಟು ನಿಗದಿಪಡಿಸಲು ಸೂಚನೆ

ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಸದ್ಯ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸದ್ಯ ರಾಜ್ಯ ಸರ್ಕಾರ ಇಂದಿನಿಂದ ಬೈಕ್ ಟ್ಯಾಕಿ ಸೇವೆಯನ್ನು ಆರಂಭಿಸಿದೆ.

ಇದನ್ನೂ ಓದಿ
ಬೆಂಗಳೂರು, ಮಧುರೈ, ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲು ಸಂಚಾರ
ಬೆಂಗಳೂರು: ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಇದನ್ನೂ ಓದಿ: ಬೆಂಗಳೂರು: ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಮತ್ತೆ ರಸ್ತೆಗಿಳಿದ ಬೌನ್ಸ್ ಇವಿ ಸ್ಕೂಟರ್

ಬೆಂಗಳೂರು ವ್ಯಾಪ್ತಿಯಲ್ಲೇ 1.20 ಲಕ್ಷ ಬೈಕ್​ಗಳು ಬೈಕ್ ಟ್ಯಾಕ್ಸಿ ಸೇವೆಗೆ ನೋಂದಣಿ ಮಾಡಿಕೊಂಡಿವೆ. ಇನ್ನು ರಾಜ್ಯದಾದ್ಯಂತ 6 ಲಕ್ಷಕ್ಕೂ ಹೆಚ್ಚು ಸವಾರರು ಬೈಕ್ ಟ್ಯಾಕ್ಸಿ ನಂಬಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದಾರೆ.  ಬೈಕ್ ಟ್ಯಾಕಿ ಸೇವೆ ರದ್ದಾದ ವೇಳೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15 ರವರೆಗೆ ವಿಸ್ತರಿಸಿದ ಹೈಕೋರ್ಟ್

ಬೈಕ್ ಟ್ಯಾಕಿ ಸೇವೆ ಆರಂಭ ಬೆನ್ನಲ್ಲೇ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಸಾರಿಗೆ ಸಚಿವರ ಭೇಟಿಗೆ ತೆರಳಲಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಕೋರ್ಟ್ ನಿರ್ದೇಶನ ಪ್ರತಿ ಸಾರಿಗೆ ಇಲಾಖೆಗೆ ಅಧಿಕೃತವಾಗಿ ಸಾರಿಗೆ ಅಧಿಕಾರಿಗಳ ಕೈಸೇರುವ ಸಾಧ್ಯತೆ ಇದೆ. ತಲುಪಿದ ನಂತರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ಚಿಂತನೆ ನಡೆಸಲಿದೆ. ಸದ್ಯ ಈ ಬಗ್ಗೆ ಮಾಧ್ಯಮಗಳಿಗೆ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:46 pm, Thu, 21 August 25