ಮಾಲೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಅಂದರ್​

|

Updated on: Mar 21, 2021 | 8:31 PM

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಜೋಡಿಪುರದ ನಂಜೇದೇವರು ಎಂಬುವವನ ಬಂಧನವಾಗಿದೆ. ಇದಲ್ಲದೆ, ಆರೋಪಿ ಮನೆಯಲ್ಲಿ ಸಂಗ್ರಹಿಸಿದ್ದ 1.5 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಾಲೂರು ಅಬಕಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾಲೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಅಂದರ್​
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಅಂದರ್​
Follow us on

ಕೋಲಾರ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಜೋಡಿಪುರದ ನಂಜೇದೇವರು ಎಂಬುವವನ ಬಂಧನವಾಗಿದೆ. ಇದಲ್ಲದೆ, ಆರೋಪಿ ಮನೆಯಲ್ಲಿ ಸಂಗ್ರಹಿಸಿದ್ದ 1.5 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಾಲೂರು ಅಬಕಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರ ಬಂಧನ
ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರ ಬಂಧನವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 10 ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಇಸ್ಮಾಯಿಲ್ ಹುಸೇನ್, ಆದಮ್ ಶೇಖ್ ಎಂಬುವವರ ಬಂಧನವಾಗಿದೆ. ಜಾನುವಾರು ಸಾಗಿಸುತ್ತಿದ್ದ ಪಿಕಪ್​ ವಾಹನವನ್ನು ಜಪ್ತಿ ಮಾಡಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕನ ಬಂಧನ
ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕನ ಬಂಧನವಾಗಿದೆ. ಬೆಂಗಳೂರಿನ ಲಗ್ಗೆರೆ ನಿವಾಸಿ ವಿಶ್ವೇಶ್ವರಗೌಡ(24) ಬಂಧಿತ ಯುವಕ. ನೆಲಮಂಗಲ ಬಳಿ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ವಿಶ್ವೇಶ್ವರಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕ ವ್ಹೀಲಿಂಗ್ ಮಾಡ್ತಿರುವುದನ್ನು ವಿಡಿಯೋ ಮಾಡಿದ್ದ ಸ್ಥಳೀಯರು ಅದನ್ನು ಪೊಲೀಸರಿಗೆ ಒಪ್ಪಿಸಿದರು. ವಿಡಿಯೋ ಆಧಾರದ ಮೇಲೆ ಆರೋಪಿ ಅರೆಸ್ಟ್​ ಆಗಿದ್ದು ಬೈಕ್​ನ ಜಪ್ತಿ ಮಾಡಲಾಗಿದೆ. ನೆಲಮಂಗಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕನ ಬಂಧನ

ಇದನ್ನೂ ಓದಿ: MIT ಕ್ಯಾಂಪಸ್​​ನಲ್ಲಿ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ.. ಇವತ್ತು 145 ಜನರಿಗೆ ವಕ್ಕರಿಸಿದ ವೈರಸ್​

 

Published On - 7:31 pm, Sun, 21 March 21