ಹಾವೇರಿ: ಬೈಕ್ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಬಳಿಯಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ನಿಂಗಪ್ಪ ಕರ್ಜಗಿ(28) ಮೃತ ಬೈಕ್ ಸವಾರ. ರಾಣೆಬೆನ್ನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ಠಾಣೆಯ PSI ವಸಂತ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.
ಬೈಕ್ಗೆ ಕಾರ್ ಡಿಕ್ಕಿ: ಅಪಘಾತದ ರಭಸಕ್ಕೆ ಕೆಳಗೆ ಬಿದ್ದು ಹೊತ್ತಿ ಉರಿದ ವಾಹನ, ಸವಾರ ಸಾವು
Published On - 9:09 pm, Sun, 17 January 21