AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಲು ಶಿವ ಕೊಲೆ ಕೇಸ್​​​: ಬಿಜೆಪಿ ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ!

ಬಿಕ್ಲು ಶಿವನ ಕೊಲೆ ಪ್ರಕರಣ ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಪ್ರಕರಣ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್​ಗೆ ಸಂಕಷ್ಟ ಎದುರಾಗಿದೆ. ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ಸರ್ಕಾರದಿಂದ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ಪೀಠ ಅ.23ಕ್ಕೆ ಅಂತಿಮ ವಿಚಾರಣೆ ನಿಗದಿಪಡಿಸಿದೆ.

ಬಿಕ್ಲು ಶಿವ ಕೊಲೆ ಕೇಸ್​​​: ಬಿಜೆಪಿ ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ!
ಭೈರತಿ ಬಸವರಾಜ್​, ಬಿಕ್ಲು ಶಿವ
Ramesha M
| Edited By: |

Updated on:Oct 09, 2025 | 4:33 PM

Share

ಬೆಂಗಳೂರು, ಅಕ್ಟೋಬರ್​ 09: ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಪಡೆದಿರುವ ಶಾಸಕ ಭೈರತಿ ಬಸವರಾಜ್​​ಗೆ (Byrathi Basavaraj) ಇದೀಗ ಸಂಕಷ್ಟ ಎದುರಾಗಿದೆ. ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ಸರ್ಕಾರದಿಂದ ಅರ್ಜಿ ಸಲ್ಲಿಸಲಾಗಿದೆ. ಸದ್ಯ ವಾದ-ಪ್ರತಿವಾದ ಆಲಿಸಿರುವ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಅ.23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ. ಅಲ್ಲಿಯವರೆಗೆ ಬಂಧನದಿಂದ ರಕ್ಷಣೆ ಮುಂದುವರಿಸಿದ್ದು, ತನಿಖಾ ಸಂಸ್ಥೆಗಳನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ವಾದ-ಪ್ರತಿವಾದ ಆಲಿಸಿದ ಪೀಠ 

ಭೈರತಿ ಬಸವರಾಜ್‌ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಪೊಲೀಸರು ಕೋಕಾ ಕಾಯ್ದೆ ಹಾಕಿದ್ದಾರೆ. ಸಂಘಟಿತ ಅಪರಾಧಕ್ಕೆ ಮಾತ್ರ ಕೋಕಾ ಕಾಯ್ದೆ ಹಾಕಬಹುದು. ಮಧ್ಯಂತರ ರಕ್ಷಣೆ ತೆರವುಗೊಳಿಸಿದರೆ ಕೋಕಾ ಕಾಯ್ದೆಯಡಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲ.  ರಾಜಕೀಯ ದ್ವೇಷದಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಕೋರಲು ಚಿಂತಿಸುತ್ತಿದ್ದೇವೆ. ಹೀಗಾಗಿ ಮಧ್ಯಂತರ ರಕ್ಷಣೆ ತೆರವುಗೊಳಿಸದಂತೆ ಮನವಿ ಮಾಡಿದರು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಮಧ್ಯಂತರ ರಿಲೀಫ್

ಇನ್ನು ಭೈರತಿ ಪರ ವಕೀಲರ ವಾದಕ್ಕೆ ಎಸ್‌ಪಿಪಿ ಬಿ.ಎನ್.ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರು. ತನಿಖೆಗೆ ಹಾಜರಾದ ವೇಳೆ ಭೈರತಿ ಬಸವರಾಜು ಸುಳ್ಳು ಮಾಹಿತಿ ನೀಡಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದರು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು

ಸಾಕ್ಷ್ಯಾಧಾರ ಕೋರ್ಟ್‌ಗೆ ತೃಪ್ತಿ ತರದಿದ್ದರೆ ಕೇಸ್ ರದ್ದುಪಡಿಸಬಹುದು, ಆದರೆ ಭೈರತಿ ವಿರುದ್ಧ ಗಂಭೀರ ಸಾಕ್ಷ್ಯಗಳಿವೆ ಎಂದು ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್​ ಅಂತಿಮ ವಿಚಾರಣೆ ಅ.23ಕ್ಕೆ ನಿಗದಿಪಡಿಸಿದೆ.

ಘಟನೆ ಹಿನ್ನೆಲೆ

ಜುಲೈ 15ರ ರಾತ್ರಿ ಬಿಕ್ಲು ಶಿವ ತನ್ನ ಮನೆಯಿಂದ ಆಚೆಬಂದು ಪುಟ್ ಪಾತ್ ಮೇಲೆ ನಿಂತುಕೊಂಡಿದ್ದ. ಈ ವೇಳೆ ಮನೆ ಸಮೀಪವೇ ಸ್ಕಾರ್ಪಿಯೋ ಕಾರಿನಲ್ಲಿ ಕಾದು ಕುಳಿತಿದ್ದ 7 ರಿಂದ 8 ಆರೋಪಿಗಳು ಬಿಕ್ಲು ಶಿವನ ಮೇಲೆ ದಾಳಿ ಮಾಡಿದ್ದರು. ತಪ್ಪಿಸಿಕೊಳ್ಳಲು ಸಾಧ್ಯವಾಗದಂತೆ ಬಿಕ್ಲು ಶಿವನನ್ನು ಕವರ್ ಮಾಡಿ ಮನಸೋ ಇಚ್ಛೆ ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:28 pm, Thu, 9 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್