ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ

40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದು ಸಚಿವ ಮಾಧುಸ್ವಾಮಿ ಸಮರ್ಥನೆ ನೀಡಿದ್ದಾರೆ.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 03, 2023 | 1:20 PM

ಮಂಡ್ಯ: ‘40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ. ನಾವು ಅದರ ಬಗ್ಗೆ ಕಮೆಂಟ್ ಮಾಡೋಕೆ ಅಗಲ್ಲ, ಶಾಸಕರು, ಸಿಎಂ ಯಾಕೆ ರಾಜೀನಾಮೆ ಕೊಡಬೇಕು‌. ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ‌. ಎಸಿಬಿಯಲ್ಲಿ ಒಬ್ಬ ಆಫೀಸರ್​ ಆಗಿದ್ದು, ದುಡ್ಡು ತೆಗೆದುಕೊಂಡಿದ್ದಾನೆ ಅದರ ಮುಂದಿನ ಪರಿಣಾಮ ಅವನು ಎದುರಿಸುತ್ತಾನೆ ಎಂದು ಸಚಿವ ಮಾಧುಸ್ವಾಮಿ(J.C Madhuswamy) ಹೇಳಿದರು.

ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕೋಟಿಗಟ್ಟಲೇ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಹುಲಿಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ‘ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್, ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡುತ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಶಾಸಕ, ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ​: ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಕಾಂಗ್ರೆಸ್ ಅವಧಿಯ ಎಲ್ಲ ಕೇಸ್​ ತನಿಕೆಯಾಗಲಿದೆ ಎಂದ ಸಿಎಂ

ಕಾಂಗ್ರೆಸ್‌ನವರಿಗೆ ಏನು ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ, ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಎನ್ನೊಕೆ ಆಗಲ್ಲ, ಮೊದಲು ಭ್ರಷ್ಟಾಚಾರ ಸಾಬೀತು ಆಗಬೇಕು. ಹಣ ಕೊಟ್ಟವರು, ತೆಗೆದುಕೊಂಡವರು ಎಲ್ಲಾ ಹೇಳಿಕೆ ತೆಗೆದುಕೊಳ್ಳಬೇಕು. ದುಡ್ಡಿಗೆ ದಾಖಲೆ ಸರಿಯಾಗಿ ಇದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Fri, 3 March 23

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ