AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಡಿಕೆಶಿ ಬಿಗ್ ಅಪ್ಡೇಟ್: 2000 ರೂ.ಬೇಕು ಅಂದ್ರೆ ಈ ನಿಯಮಗಳನ್ನ ಪಾಲಿಸಲೇಬೇಕು

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಹಣ ಅನರ್ಹರ ಪಾಲಾಗುತ್ತಿದ್ದು, ಇದೀಗ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಲಾಭವಾಗಲು ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾದ್ರೆ, ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಏನೇನು ಮಾಡಬೇಕು ಎನ್ನುವ ವಿವರ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಡಿಕೆಶಿ ಬಿಗ್ ಅಪ್ಡೇಟ್: 2000 ರೂ.ಬೇಕು ಅಂದ್ರೆ ಈ ನಿಯಮಗಳನ್ನ ಪಾಲಿಸಲೇಬೇಕು
Gruhalakshmi Scheme
ಪ್ರಸನ್ನ ಗಾಂವ್ಕರ್​
| Edited By: |

Updated on: Jul 19, 2026 | 8:26 PM

Share

ಮುಖ್ಯಾಂಶಗಳು

  • ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯ
  • ಫಲಾನುಭವಿಗಳದ್ದೇ ಪೋನ್ ನಂಬರ್, ಖಾತೆ ಇರಬೇಕು ಎಂದ ಸಿಎಂ ಡಿಕೆ ಶಿವಕುಮಾರ್
  • ಫಾರಂ ಯಾವ ರೀತಿ ಇರಬೇಕು ಅಂತ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದ ಸಿಎಂ

ಬೆಂಗಳೂರು, (ಜುಲೈ 19): ಗೃಹಲಕ್ಷ್ಮೀ ಯೋಜನಯನ್ನು (gruhalakshmi scheme) ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಹೌದು…ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮೀ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ  ಸಭೆಯಲ್ಲಿ (Cabinet Meeting) ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಒಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪರಿಷ್ಕರಣೆಗೆ ಮುಂದಾಗಿದ್ದು, ಅರ್ಹ ಫಲಾನುಭವಿಗಳ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆ ಇರುವುದು ಕಡ್ಡಾಯಗೊಳಿಸಲಾಗಿದೆ.

ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮೀ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯವಾಗಿದೆ. ಅವರದ್ದೇ ಫೋನ್ ನಂಬರ್ ಇರಬೇಕು. ಯಾರದ್ದೋ ನಂಬರ್ ಕೊಟ್ಟು ಅವರಿಗೆ ಮೆಸೇಜ್ ಹೋಗಬಾರದು. ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್​ಗೆ ಸರ್ಕಾರದ ಹಣ​​​ ಹೋಗಬೇಕು ಎಂದು ವಿವರಿಸಿದರು.

ನಮ್ಮ ಗ್ಯಾರಂಟಿ ತಂಡ ಹೋಗಿ ಮಾಹಿತಿ ಪಡೆಯಬೇಕು. ಇದಕ್ಕಾಗಿ 20 ಕೋಟಿ ರೂಪಾಯಿ ಇಟ್ಟಿದ್ದೇವೆ. ಫಾರಂ ಯಾವ ರೀತಿ ಇರಬೇಕು ಅಂತ ಚರ್ಚಿಸಲಾಗಿದ್ದು, ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್​ಗೆ ಸರ್ಕಾರದ ಹಣ​​​ ಹೋಗಬೇಕು. ಯೋಜನೆಯಿಂದ ಯಾರನ್ನು ತೆಗೆಯುವ ಉದ್ದೇಶವಿಲ್ಲ.ನಾವು ಕೊಡುವ ಹಣ ಅವರಿಗೆ ಸರಿಯಾಗಿ ತಲುಪಬೇಕು ಎಂದು ಸ್ಪಷ್ಟಪಡಿಸಿದರು.

ಆಪರೇಷನ್ ಗೃಹಲಕ್ಷ್ಮಿ

ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತು ಮಾಡುವ ಕೆಲಸ ಮಾಡ್ತಿದೆ. ಪ್ರತಿ ಒಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ. ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ