ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 07, 2024 | 4:02 PM

ಬೆಂಗಳೂರು, ಅಕ್ಟೋಬರ್​ 07: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Case) ಸಂಬಂಧಿಸಿದಂತೆ ಡಿವೈಎಸ್​ಪಿ ಶ್ರೀಧರ್ ಪೂಜಾರಿ​​ ಅನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್​ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ ಕರೆಸಿ ಸಿಐಡಿ ಕಚೇರಿಯಲ್ಲೇ ಎಸ್​​ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. DySP ಶ್ರೀಧರ್ ಈ ಹಿಂದೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ವಿರುದ್ಧ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಬಿಟ್ ಕಾಯಿನ್ ಕೇಸ್​​​​ನಲ್ಲಿ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪವನ್ನು ಶ್ರೀಧರ್ ಕೆ. ಪೂಜಾರಿ ಎದುರಿಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಈಗಾಗಲೇ ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲಾದೆ. ಈ ವೇಳೆ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿಯೇ ಎಫ್‍ಐಆರ್ ಕೂಡ ದಾಖಲಾಗಿತ್ತು. ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದ. ಜೊತೆಗೆ ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದಿದ್ದವು. ಇದರಿಂದಲೇ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Mon, 7 October 24

ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​