ಬಿಟ್ ಕಾಯಿನ್ ಕೇಸ್: ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು
ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ್ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಬೆಂಗಳೂರು, ಮೇ 2: ಬಿಟ್ ಕಾಯಿನ್ ಕೇಸ್ನಲ್ಲಿ (Bitcoin Case) ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ್ಗೆ (Sridhar K. Pujar) ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ. ಮೇ 8ರಂದು ಬೆಳಗ್ಗೆ 9 ಗಂಟೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ 2 ಲಕ್ಷ ರೂ. ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಕೆ. ಪೂಜಾರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೆ ಪೊಲೀಸರು ಆಕ್ಷೇಪಿಸಬಾರದು ಎಂದು ನ್ಯಾ.ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್
ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳು ಸಿಐಡಿ ವಶಕ್ಕೆ
ಬಿಟ್ ಕಾಯಿನ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾಗ ತಂಡದಲ್ಲಿ ಶ್ರೀಧರ್ ಪೂಜಾರಿ ಕೂಡ ಇದ್ದರು. ಈ ವೇಳೆ ಅಕ್ರಮ ಎಸಗಿರುವ ಆರೋಪ ಕೇಳಿಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಎಸ್ಐಟಿ ಫೆಬ್ರವರಿ 17 ರಂದು ಶ್ರೀಧರ್ ಪೂಜಾರಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಶ್ರೀಧರ್ ಪೂಜಾರಿ ಪರಾರಿಯಾಗಿದ್ದರು. ಘಟನೆಯಲ್ಲಿ ಎಎಸ್‌ಐ ಭಾಸ್ಕರ್ ಗಂಭೀರವಾಗಿ ಗಾಯಗೊಂಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.