ಬಿಟ್ ಕಾಯಿನ್ ಕೇಸ್: ಶ್ರೀಧರ್ ಪೂಜಾರ್ ಹಿಡಿದುಕೊಟ್ಟವರಿಗೆ ಬಹುಮಾನ ಘೋಷಿಸಿದ ರಾಜ್ಯ ಪೊಲೀಸ್ ಇಲಾಖೆ
ಬಿಟ್ ಕಾಯಿನ್ ಕೇಸ್ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ. ಈ ಕುರಿತಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಸಿಐಡಿ ಫೈನಾನ್ಶಿಯಲ್ ಇಂಟೆಲಿಜೆನ್ಸ್ ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು, ಮಾರ್ಚ್ 16: ಬಿಟ್ ಕಾಯಿನ್ (Bitcoin) ಕೇಸ್ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ. ಈ ಕುರಿತಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. DySP ಶ್ರೀಧರ್ ಪೂಜಾರ್ ಬಗ್ಗೆ ಮಾಹಿತಿಯಿದ್ದರೆ ಸಿಐಡಿ ಫೈನಾನ್ಶಿಯಲ್ ಇಂಟೆಲಿಜೆನ್ಸ್ ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಿಐಡಿ SIT ಬಂಧಿಸಲು ತೆರಳಿದ್ದ ವೇಳೆ ಎಐಟಿ ಟೀಂ ಕಾರಿಗೆ ಮತ್ತೊಂದು ವಾಹನ ಡಿಕ್ಕಿಹೊಡೆಸಿ ಶ್ರೀಧರ್ ಪರಾರಿಯಾಗಿದ್ದ. ಕಾರಿಗೆ ಡಿಕ್ಕಿ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಎಸ್ಐಟಿ ಕೇಸ್ ದಾಖಲಿಸಿದೆ. ಇದೀಗ ಶ್ರೀಧರ್ ಪೂಜಾರ್ ಪತ್ತೆಗಾಗಿ ಬಹುಮಾನ ಘೋಷಿಸಿದೆ.
ಜಾಮೀನಿಗೆ ಅರ್ಜಿ ಹಾಕಿದ್ದ ಶ್ರೀಧರ್ ಪೂಜಾರ್
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಧರ್ ಪೂಜಾರ್ ಇತ್ತೀಚೆಗೆ ಜಾಮೀನು ಅರ್ಜಿ ಹಾಕಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ವಜಾ ಮಾಡಿದ ಹಿನ್ನಲೆ ಪ್ರಮುಖ ಆರೋಪಿಯ ಬಂಧನಕ್ಕೆ ಎಸ್.ಐ.ಟಿ ತಂಡ ಹೋಗಿದ್ದರು. ಈ ಸಂದರ್ಭದಲ್ಲಿ ಪೊಲೀಸರ ವಾಹನಕ್ಕೆ ಗುದ್ದಿ ಎಸ್ಕೇಪ್ ಆಗಿದ್ದಾರೆ. ಈಗಾಗಲೇ ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಕೇಸ್: IPS ಅಧಿಕಾರಿ ಸಂದೀಪ್ ಪಾಟೀಲ್ ವಿಚಾರಣೆ ಮಾಡಿದ SIT
ಇನ್ನು ಶ್ರೀಧರ್ ಪೂಜಾರ್ ವಿರುದ್ಧ 307 ಕೊಲೆ ಯತ್ನ, 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ.
ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಯ ವಿಶೇಷ ತನಿಖಾ ದಳ ಚುರುಕುಗೊಳಿಸಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಎಸ್ಐಟಿ ದಾಳಿ ನಡೆಸಿ ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್ ಹೆಗ್ಡೆ, ಪ್ರಸಿದ್ಧ್ ಅವರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು. ಕೋರ್ಟ್ನಿಂದ ಸರ್ಚ್ ವಾರೆಂಟ್ ಪಡೆದ ಸಿಐಡಿ ತಂಡ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ: ಬೈಟ್ಕಾಯಿನ್ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗ್ತಾರೆ; ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್
ಸದಾಶಿವನಗರದಲ್ಲಿರುವ ಸುನೀಶ್ ಹೆಗ್ಡೆ, ಪ್ರಸಿದ್ದ್ ಮನೆ ಮೇಲೆ ರೇಡ್ ಮಾಡಿತ್ತು. ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದ SIT ತನಿಖೆ ನಡೆಸುತ್ತಿದ್ದು ಮರುತನಿಖೆ ಅಷ್ಟೊಂದು ಸುಲಭವಲ್ಲ ಇಸ್ರೇಲ್ ದೇಶದ ಸಹಾಯ ಪಡೆಯಲು ಹಂತ-ಹಂತ ಪ್ರಕ್ರಿಯೆ ಪಾಲಿಸಬೇಕಿತ್ತು. ಅಲ್ಲದೇ ಕ್ರಿಪ್ಟೋ ಕರೆನ್ಸಿ ವಾಲೇಟ್ಗಳನ್ನ ಫ್ರೀಜ್ ಮಾಡುವಷ್ಟು ಟೆಕ್ನಾಲಜಿ ನಮ್ಮಲ್ಲಿ ಇನ್ನೂ ಅಷ್ಟಾಗಿ ಬೆಳೆದಿಲ್ಲ. ಹೀಗಾಗಿ ರಾಜ್ಯ ಸಿಐಡಿ SIT ತಂಡ ಇದಕ್ಕಾಗಿ ಇಸ್ರೇಲ್ ಬಳಿ ಸಹಾಯ ಕೇಳುವ ಸಾಧ್ಯತೆಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



