ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು

ಬಿಟ್ ಕಾಯಿನ್ ಹಗರಣ ರಾಜ್ಯದ ರಾಜಕೀಯದಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದೆಷ್ಟರ ಮಟ್ಟಿಗೆ ಅಂದರೆ ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು
ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್​ಗೆ ನಿರೀಕ್ಷಣಾ ಜಾಮೀನು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 27, 2024 | 6:13 PM

ಬೆಂಗಳೂರು, ಜೂನ್​ 27: ಬಹುಕೋಟಿ ಬಿಟ್ ಕಾಯಿನ್ (Bitcoin) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ (Sridhar K Pujar) ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್ ದಾಖಲಿಸಿದ್ದಾರೆ. ಒಂದೇ ಕೇಸ್​ಗೆ ಎರಡೆರಡು ಬಾರಿ ಎಫ್​ಐಆರ್​ ಮಾಡಿ ತನಿಖೆ ನಡೆಸಿದ್ದಾರೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಿದ್ದಾರೆ ಎಂದು ಶ್ರೀಧರ್ ಪೂಜಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದು, ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ. ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ. ವಾಟ್ಸಾಪ್​ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ. ಹಾಗಿದ್ದರೆ ಆಗಿನ ಆಯುಕ್ತರು, ಜಂಟಿ ಆಯುಕ್ತರು ಮತ್ತಿತರರ ಮೇಲೇಕೆ ಕೇಸ್ ದಾಖಲಿಸಲಿಲ್ಲ ಎಂದು ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ತರಾಟೆ ತೆಗೆದುಕೊಂಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್​ ದಾಖಲಿಸಿಕೊಂಡಿದ್ದ ಎಸ್​ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದರು. ಈ ವಿಚಾರವಾಗಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದ ಶ್ರೀಧರ್ ಪೂಜಾರಿ ತೆರೆಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್​ಗೆ ಅರ್ಜಿ ಕೂಡ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ