AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್

ಬಿಟ್​ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಹೀಗಾಗಿ ಅವರಿಗೂ ಹಗರಣದ ಉರುಳು ಸುತ್ತಿಕೊಂಡಿದೆ. ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ 2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ ಎಸ್​ಐಟಿ ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು.

ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್
ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್
Kiran HV
| Updated By: Ganapathi Sharma|

Updated on: May 14, 2024 | 11:39 AM

Share

ಬೆಂಗಳೂರು, ಮೇ 14: ಬಿಟ್​ ಕಾಯಿನ್ ಹಗರಣ (Bitcoin Scam Case) ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್​​ಐಟಿ (SIT) ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್​ಗೆ ನೋಟಿಸ್ ನೀಡಲಾಗಿದೆ. ಜತೆಗೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್ ನೀಡಿತ್ತು. ಆದರೆ, ಸಂದೀಪ್ ಪಾಟೀಲ್​ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಕಾರಣ ತಿಳಿಸುವಂತೆಯೂ ನೋಟಿಸ್​​ನಲ್ಲಿ ಎಸ್​ಐಟಿ ಸೂಚಿಸಿದೆ.

ಬಿಟ್​ ಕಾಯಿನ್ ಹಗರಣ ಸಂಬಂಧ ಫೆಬ್ರವರಿಯಲ್ಲಿ ಸಂದೀಪ್ ಪಾಟೀಲ್​ರನ್ನು ಎಸ್​​ಐಟಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿತ್ತು. ಬಿಟ್​ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಹೀಗಾಗಿ ಅವರಿಗೂ ಹಗರಣದ ಉರುಳು ಸುತ್ತಿಕೊಂಡಿದೆ.

ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ 2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ ಎಸ್​ಐಟಿ ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು. ಆರೋಪಿಗಳ ಹೆಸರು ಪ್ರಸ್ತಾಪಿಸದೇ ತನಿಖೆ ಶುರುಮಾಡಲಾಗಿತ್ತು. ಇಷ್ಟೇ ಅಲ್ಲದೇ ಪ್ರಕರಣದಲ್ಲಿ ಸಂತೋಷ್ ಮತ್ತು ಪ್ರಶಾಂತ್ ಬಾಬು ಎನ್ನುವವರನ್ನು ಬಂಧಿಸಲಾಗಿತ್ತು.

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಬಂಧಿಸುವಲ್ಲಿ ಮೇ 7ರಂದು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ

2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ