‘ನಾ ನಾಯಕಿ’ ಕಾಂಗ್ರೆಸ್ ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮೀ ಯೋಜನೆ ಇರಬೇಕು’ ಎಂದು ಬಿಜೆಪಿ ಹೇಳಿದೆ.

‘ನಾ ನಾಯಕಿ’ ಕಾಂಗ್ರೆಸ್ ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ
ಬಿಜೆಪಿ ಟ್ವೀಟ್ ಮಾಡಿರುವ ವಿಡಿಯೋದ ಸ್ಕ್ರೀನ್​ಗ್ರ್ಯಾಬ್
Follow us
TV9 Web
| Updated By: Ganapathi Sharma

Updated on: Jan 16, 2023 | 8:05 PM

ಬೆಂಗಳೂರು: ನಗರದ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಕಾಂಗ್ರೆಸ್​ (Congress) ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗವಹಿಸಲು ಬಂದವರಿಗೆ ಹಣ ನೀಡಲಾಗಿತ್ತು ಎಂದು ಬಿಜೆಪಿ (BJP) ಆರೋಪಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ? ‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮೀ ಯೋಜನೆ ಇರಬೇಕು’ ಎಂದು ಉಲ್ಲೇಖಿಸಿ ವ್ಯಂಗ್ಯವಾಡಿದೆ. ಜತೆಗೆ ಆರೋಪಕ್ಕೆ ಸಂಬಂಧಿಸಿದ ವಿಡಿಯೊ ತುಣುಕನ್ನು ಲಗತ್ತಿಸಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಮಹಿಳೆಯರಿಗೆ ಬೇಷರತ್ತಾಗಿ 2,000 ರೂ. ನೀಡಲಾಗುವುದು. ಇದಕ್ಕಾಗಿ ಗೃಹಲಕ್ಷ್ಮೀ ಯೋಜನೆ ರೂಪಿಸಲಾಗುವುದು ಎಂದು ‘ನಾ ನಾಯಕಿ’ ಸಮಾವೇಶದಲ್ಲಿ ಘೋಷಿಸಲಾಗಿತ್ತು. ಜತೆಗೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು.

ಇದನ್ನೂ ಓದಿ: ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನಿರೂಪಿಕಿಯನ್ನು ಕೆಳಗಿನಿಂದ ಮೇಲೆ, ಮೇಲಿಂದ ಕೆಳಗೆ ಆಶ್ಚರ್ಯಚಕಿತರಾಗಿ ನೋಡಿದ್ದು ಯಾಕೋ?

ಮಹಿಳೆಯರಿಗಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಬಿಜೆಪಿ ಸರ್ಕಾರ ನೀಡಿದ್ದ ಜಾಹೀರಾತಿನ ಬಗ್ಗೆ ಟೀಕಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾವು ಕಾರ್ಯಕ್ರಮ ಹಮ್ಮಿಕೊಂಡ ಬಳಿಕ ಬಿಜೆಪಿಗೆ ಜ್ಞಾನೋದಯವಾಗಿದೆ ಎಂದು ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ವಿಡಿಯೊ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಲೇವಡಿ ಮಾಡಿದೆ.

ಪ್ರಿಯಾಂಕಾ ಗಾಂಧಿ ಹೋದಲ್ಲಿ ಕಾಂಗ್ರೆಸ್ ಗೆಲ್ಲಲ್ಲ; ಸುಧಾಕರ್ ವ್ಯಂಗ್ಯ

‘ನಾ ನಾಯಕಿ’ ಸಮಾವೇಶದ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್ ವ್ಯಂಗ್ಯವಾಡಿದ್ದು, ಪ್ರಿಯಾಂಕಾ ಗಾಂಧಿ ಹೋದಲ್ಲಿ ಕಾಂಗ್ರೆಸ್ ಗೆಲ್ಲಲ್ಲ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ಕಾಂಗ್ರೆಸ್ 8-10 ಸೀಟ್ ಗೆಲ್ಲುತ್ತಿತ್ತು. ಪ್ರಿಯಾಂಕಾ ಗಾಂಧಿ ಹೋದ ಮೇಲೆ 1-2 ಸ್ಥಾನ ಮಾತ್ರ ಗೆದ್ದಿದ್ದಾರೆ. ಕರ್ನಾಟಕದಲ್ಲಿಯೂ ಹೀಗೆಯೇ ಆಗಲಿದೆ ಎಂದು ನೆಲಮಂಗಲದಲ್ಲಿ ಕೆ. ಸುಧಾಕರ್ ಹೇಳಿದ್ದಾರೆ. ಮಹಿಳೆಯರಿಗಾಗಿ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಬಗ್ಗೆ ಜಾಹೀರಾತು ನೀಡಿದ್ದೇವೆ. ಕಾಂಗ್ರೆಸ್‌ನ ಪ್ರಣಾಳಿಕೆಗಳು ಘೋಷಣೆಯಾಗಿಯೇ ಉಳಿಯುತ್ತವೆ. ಚುನಾವಣೆಗೂ ಮುನ್ನವೇ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತೇವೆ. ನಮ್ಮ ಸರ್ಕಾರ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!