AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Stampede: ಬೆಂಗಳೂರಿನಲ್ಲಿ ಕಾಲ್ತುಳಿತ; ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವೆಂದ ಬಿಜೆಪಿ

ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯ ಯಾತ್ರೆ ಆಯೋಜಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ದೊಡ್ಡ ಆಘಾತ ಎದುರಾಗಿದೆ. ನಿನ್ನೆ ರಾತ್ರಿ ಐಪಿಎಲ್ ಕಪ್ ಗೆದ್ದಿದ್ದ ಆರ್​ಸಿಬಿಗೆ ಇಂದು ಬೆಂಗಳೂರಿನಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭದ್ರತಾ ವ್ಯವಸ್ಥೆಗೆ ಪೊಲೀಸ್ ಇಲಾಖೆಗೆ ಹೆಚ್ಚು ಸಮಯವೂ ಸಿಕ್ಕಿರಲಿಲ್ಲ. ನಿರೀಕ್ಷೆಗೂ ಮೀರಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿ 10 ಜನ ಸಾವನ್ನಪ್ಪಿದ್ದಾರೆ. ಈ ಸಾವಿಗೆ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ವಿಪಕ್ಷಗಳು ಟೀಕಿಸಿವೆ.

Bangalore Stampede: ಬೆಂಗಳೂರಿನಲ್ಲಿ ಕಾಲ್ತುಳಿತ; ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವೆಂದ ಬಿಜೆಪಿ
Rcb Fans In Bengaluru
ಸುಷ್ಮಾ ಚಕ್ರೆ
|

Updated on:Jun 04, 2025 | 7:37 PM

Share

ಬೆಂಗಳೂರು, ಜೂನ್ 4: ಎಲ್ಲ ಸರಿಯಾಗಿದ್ದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಆರ್​ಸಿಬಿ ತಂಡದ ವಿಜಯ ಯಾತ್ರೆಯ ಸಂಭ್ರಮ ತುಂಬಿರಬೇಕಿತ್ತು. ಆದರೆ, ಅಲ್ಲೀಗ ಸೂತಕದ ಛಾಯೆ ಆವರಿಸಿದೆ. ಅಭಿಮಾನಿಗಳ ನಡುವೆ ಕಾಲ್ತುಳಿತವಾಗಿ ಒಂದು ಮಗು ಸೇರಿದಂತೆ 10 ಜನ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾಲ್ತುಳಿತಕ್ಕೆ ಬಿಜೆಪಿ ಕರ್ನಾಟಕ ಸರ್ಕಾರವನ್ನು ಹೊಣೆಗಾರನನ್ನಾಗಿ ಮಾಡಿದೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತದ ನಂತರ ಅನೇಕರು ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆಯೇ ಎದ್ದು ಕಾಣುತ್ತಿತ್ತು. ಅಮಾಯಕರು ಸಾಯುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರೀಲ್‌ಗಳನ್ನು ಚಿತ್ರೀಕರಿಸುವಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು. ಇದು ಕ್ರಿಮಿನಲ್ ನಿರ್ಲಕ್ಷ್ಯ. ಕಾಂಗ್ರೆಸ್ ಸರ್ಕಾರದ ಕೈಗಳಲ್ಲಿ ರಕ್ತವಿದೆ ಎಂದು ಟೀಕಾ ಪ್ರಹಾರ ನಡೆಸಿದೆ.

ಇದನ್ನೂ ಓದಿ
Image
ಬೆಂಗಳೂರಿನ ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 11 ಸಾವು
Image
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ

ಇದನ್ನೂ ಓದಿ: Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

ಬಿಜೆಪಿ ನಾಯಕ ಅಮಿತ್ ಮಾಳವಿಯಾ ಕೂಡ ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳೂರಿನಲ್ಲಿ ದುರಂತ ಕಾಲ್ತುಳಿತ. ಆಚರಣೆ ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಆರ್‌ಸಿಬಿಯ ಐಪಿಎಲ್ ಅಭಿಯಾನವನ್ನು ಆಚರಿಸಲು ಕರ್ನಾಟಕ ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಳಪೆ ಯೋಜನೆ ಮತ್ತು ಜನಸಂದಣಿಯ ನಿರ್ವಹಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ, 16 ಜನರು ಗಾಯಗೊಂಡಿದ್ದಾರೆ, ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಈ ಹೃದಯವಿದ್ರಾವಕ ಘಟನೆಯನ್ನು ತಪ್ಪಿಸಬಹುದಿತ್ತು. ಮೂಲಭೂತ ಆಡಳಿತಾತ್ಮಕ ದೂರದೃಷ್ಟಿಯ ಕೊರತೆ ಮತ್ತು ರಾಜ್ಯ ಸರ್ಕಾರದ ಜನಸಂದಣಿ ನಿಯಂತ್ರಣದಲ್ಲಿನ ವೈಫಲ್ಯವು ಸರಿಪಡಿಸಲಾಗದ ನಷ್ಟಕ್ಕೆ ಕಾರಣವಾಗಿದೆ. ಇದರ ಹೊಣೆಗಾರಿಕೆಯನ್ನು ಕಾಂಗ್ರೆಸ್ ಸರ್ಕಾರವೇ ಹೊರಬೇಕು. ಇದು ಆಕಸ್ಮಿಕವಲ್ಲ, ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಗಳು ಬಲಿಯಾಗಿವೆ ಎಂದಿದ್ದಾರೆ.

ನ್ಯಾಯಾಂಗ ತನಿಖೆಯಾಗಲಿ:

ಬೆಂಗಳೂರಿನ ಆರ್‌ಸಿಬಿ ಆಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ವಿಜಯೇಂದ್ರ, “ಈ ದುರಂತದ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು. ಸರ್ಕಾರ ಯಾವುದೇ ಸಿದ್ಧತೆ ಇಲ್ಲದೆ ಬೃಹತ್ ರ್ಯಾಲಿಯನ್ನು ನಡೆಸಲು ಆಯ್ಕೆ ಮಾಡಿತು. ಸುರಕ್ಷತೆ ಎಂದಿಗೂ ಆದ್ಯತೆಯಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಅದರ ಬದಲಾಗಿ, ಪ್ರಚಾರದ ಮೇಲೆ ಗಮನ ಕೇಂದ್ರೀಕರಿಸಲಾಗಿತ್ತು. ಇದರ ಪರಿಣಾಮವಾಗಿ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು, ಹಲವಾರು ಯುವಕರು ಇನ್ನೂ ಐಸಿಯುನಲ್ಲಿದ್ದಾರೆ. ಕ್ರೀಡಾಂಗಣದ ಒಳಗೆ ಯಾವುದೇ ಪೊಲೀಸ್ ಉಪಸ್ಥಿತಿ ಇರಲಿಲ್ಲ, ಆಂಬ್ಯುಲೆನ್ಸ್ ಸೌಲಭ್ಯಗಳಿರಲಿಲ್ಲ ಮತ್ತು ಗಾಯಗೊಂಡವರು ಆಸ್ಪತ್ರೆಗೆ ಸಾಗಿಸಲು ತಾವೇ ವ್ಯವಸ್ಥೆ ಮಾಡಬೇಕಾಗಿತ್ತು ಎಂದು ಅಲ್ಲಿದ್ದ ಜನರೇ ಹೇಳಿದ್ದಾರೆ. ಇದು ಸಂಪೂರ್ಣ ಆಡಳಿತಾತ್ಮಕ ವೈಫಲ್ಯ. ಈ ಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಮುಖ್ಯಮಂತ್ರಿ ವಹಿಸಿಕೊಳ್ಳಬೇಕು ಮತ್ತು ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 10 ಜನರು ಸಾವನ್ನಪ್ಪಿರುವುದು ಹಾಗೂ ಸುಮಾರು 30 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಸೂಕ್ತ ವ್ಯವಸ್ಥೆಗಳು, ಯೋಜ‌ನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಸಂಭ್ರಮಾಚರಣೆಗಳು ನಡೆಯುತ್ತದೆ, ಆದರೆ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆಗಳನ್ನು ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:16 pm, Wed, 4 June 25