ಚನ್ನಪಟ್ಟಣ ಬೈ ಎಲೆಕ್ಷನ್: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬಿಜೆಪಿಯ ಸಿಪಿ ಯೋಗೇಶ್ವರ್​ ಅವರು ಕಾಂಗ್ರೆಸ್​ ಸೇರ್ಪಡೆಗೊಂಡು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಇತ್ತ ಬಿಜೆಪಿ -ಜೆಡಿಎಸ್​ ಮೈತ್ರಿಕೂಟದ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದ್ದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ​ ನಿಖಿಲ್ ಕುಮಾರಸ್ವಾಮಿಗೆ ಮಣೆಹಾಕಲಾಗಿದೆ. ಈ ಮೂಲಕ ಎನ್​ಡಿಎ ಅಭ್ಯರ್ಥಿ ಯಾರು-ಯಾರು ಎನ್ನುವ ಗೊಂದಲಕ್ಕೆ ತೆರಬಿದ್ದಿದೆ.

ಚನ್ನಪಟ್ಟಣ ಬೈ ಎಲೆಕ್ಷನ್: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ
ಚನ್ನಪಟ್ಟಣಕ್ಕೆ ಕೊನೆಗೂ ಎನ್​ಡಿಎ ಅಭ್ಯರ್ಥಿ ಘೋಷಣೆ
Follow us
ರಮೇಶ್ ಬಿ. ಜವಳಗೇರಾ
|

Updated on:Oct 24, 2024 | 4:16 PM

ಬೆಂಗಳೂರು, (ಅಕ್ಟೋಬರ್ 24): ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ. ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕಳೆದ ಹಲವು ದಿನಗಳಿಂದ ಗೊಂದಲವಾಗಿ ಮಾರ್ಪಟ್ಟಿದ್ದ ಅಭ್ಯರ್ಥಿ ಆಯ್ಕೆ ಸಂಬಂಧ, ಇಂದು(ಅಕ್ಟೋಬರ್ 24)​ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.  ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

ಇದನ್ನೂ ಓದಿ: ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಸಮನ್ವಯ ಸಭೆಗೂ ಮುನ್ನವೇ ಘೋಷಣೆ

ಇನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಮನ್ವಯ ಸಭೆಗೂ ಮೊದಲೇ ಇತ್ತ ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿಯೇ ಚನ್ನಪಟ್ಟಣದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಜೆಡಿಎಸ್​ ಸಭೆ ಬಳಿಕ ಮಾತನಾಡಿದ ದೇವೇಗೌಡ,  ನಿಖಿಲ್ ಅಭ್ಯರ್ಥಿಯಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೊನ್ನೆ ನಡೆದ ಸಭೆಯಲ್ಲೇ ಸರ್ವಾನುಮತ ನಿರ್ಧಾರ ಕೈಗೊಳ್ಳಲಾಗಿತ್ತು. ಆದ್ರೆ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಬೇಕೆಂದು ನಿಖಿಲ್ ಹೇಳಿದ್ದರು. ಇಂದು ಮತ್ತೆ ಕಾರ್ಯಕರ್ತರು ಬಂದು ನಿಖಿಲ್ ಸ್ಪರ್ಧೆಗೆ ಆಗ್ರಹಿಸಿದರು. ಹೀಗಾಗಿ ನಿಖಿಲ್‌ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಚನ್ನಪಟ್ಟಣ ಅಭ್ಯರ್ಥಿಯಾಗಿ ನಾಳೆ ನಿಖಿಲ್ ನಾಮಪತ್ರ ಸಲ್ಲಿಸುತ್ತಾರೆ. ಇದರಲ್ಲಿ ನಾನು ಸಹ ಭಾಗಿಯಾಗುತ್ತೇನೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ನಿಖಿಲ್​ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಉಪಚುನಾವಣೆ ಕಣಕ್ಕಿಳಿಸಲಾಗಿದೆ. ಈ ಚುನಾವಣೆಯಲ್ಲಿ ನಿಖಿಲ್ ಭವಿಷ್ಯ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:08 pm, Thu, 24 October 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ