AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದು, ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ
ಆರ್ ಅಶೋಕ
ಗಣಪತಿ ಶರ್ಮಾ
|

Updated on: Jan 31, 2026 | 11:00 AM

Share

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

R Ashoka Tweet

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ