ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ಕಟೀಲ್​ಗೆ ಶಾಕ್!

ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ಉಪ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದೆ. ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ಸೇರಿದಂತೆ

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ಕಟೀಲ್​ಗೆ ಶಾಕ್!
ಕಿಶೋರ್‌ ಕುಮಾರ್‌ ಪುತ್ತೂರು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 02, 2024 | 8:45 PM

ಬೆಂಗಳೂರು/ಮಂಗಳೂರು, (ಅಕ್ಟೋಬರ್ 01): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್​ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ಗೆ ಮುಖಭಂಗವಾಗಿದೆ. ಲೋಕಾಸಭಾ ಚುನಾವಣೆಯಲ್ಲೂ ಸಹ ಟಿಕೆಟ್​ ಮಿಸ್ ಆಗಿತ್ತು, ಇದೀಗ ವಿಧಾನಪರಿಷತ್ ಉಪಚುನಾವಣೆಯ ಟಿಕೆಟ್​ ಸಹ ಕೈತಪ್ಪಿದೆ.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ನಿಗದಿಯಾಗಿದ್ದು, ಬಿಜೆಪಿ ಗೆದ್ದಿದ್ದ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಬಿಜೆಪಿ ಪಾಲಿಗೆ ಸಿಕ್ಕಿದ್ದು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಹಾಗಾಗಿ ಈ ಬಾರಿ ಗೆಲ್ಲುವ ಸಾಧ್ಯತೆ ಬಿಜೆಪಿಗೇ ಹೆಚ್ಚಾಗಿದೆ. ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿತ್ತು.

ಇದನ್ನೂ ಓದಿ: ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

ಸುದೀರ್ಘ ಅವಧಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಮಾಜಿ ಸಂಸದ ನಳಿನ್​ಕುಮಾರ್​ ಕಟೀಲ್​ಗೆ ಈ ಬಾರಿಯ ಲೋಕಸಭಾ ಟಿಕೆಟ್​ ನಿರಾಕರಿಸಿ ಹೊಸಬರಿಗೆ ಅವಕಾಶ ನೀಡಿದರೂ ಅಸಮಧಾನಗೊಳ್ಳದೆ ಹೊಸ ಅಭ್ಯರ್ಥಿ ಗೆಲ್ಲಿಸಲು ಅವರು ಶ್ರಮಿಸಿದ್ದರು. ಅಲ್ಲದೆ ಪಕ್ಷದ ನಿಷ್ಠೆ ಮುಂದುವರೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ ಅವರಿಗೆ ಈಗ ಪರಿಷತ್ ಟಿಕೆಟ್​ ನೀಡಬೇಕು ಎನ್ನುವ ಅಭಿಪ್ರಾಯ ಪಕ್ಷದ ರಾಜ್ಯ ನಾಯಕರು ಮತ್ತು ಸಂಘ ಪರಿವಾರದ ಕಡೆಯಿಂದ ಬಂದಿತ್ತು. ಅಲ್ಲದೇ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲೂ ಸಹ ಕಟೀಲ್ ಅವರ ಹೆಸರನ್ನು ಪ್ರಸ್ತಾಪಿಸಿ ಕೇಂದ್ರದಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಆದ್ರೆ, ಅಚ್ಚರಿ ಎಂಬಂತೆ ಕಿಶೋರ್‌ ಕುಮಾರ್‌ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 1 October 24

ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ