AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ ಬಿಜೆಪಿ ನಾಯಕರು ಈ ಕೊಲೆಯ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಶಂಕಿಸಿದ್ದಾರೆ. ಪೊಲೀಸರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಕೊಲೆಗೆ ಮೂರು ತಿಂಗಳ ಮೊದಲೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬಿಜೆಪಿ ಮನವಿ, ಸುಹಾಸ್​ ಶೆಟ್ಟಿ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on:May 09, 2025 | 1:38 PM

Share

ಬೆಂಗಳೂರು, ಮೇ 09: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA)ಗೆ ವಹಿಸುವಂತೆ ರಾಜ್ಯ ಬಿಜೆಪಿ (BJP) ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
Image
ಸುಹಾಸ್ ಶೆಟ್ಟಿ ಕೊಲೆ: ಇಲ್ಲಿದೆ ಆರೋಪಿಗಳ ಪ್ಲ್ಯಾನ್​​ನ ಇನ್​ಸೈಡ್ ಡಿಟೇಲ್ಸ್
Image
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
Image
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?

ಸುಹಾಸ್ ಕೊಲೆಗೆ ಹೇಗಿತ್ತು ಸಫ್ವಾನ್ ಪ್ಲಾನ್?

ಸುಹಾಸ್ ಶೆಟ್ಟಿ ಚಲನ ವಲನಗಳ ಮೇಲೆ ಪ್ರಮುಖ ಆರೋಪಿ ಸಫ್ವಾನ್ 15 ದಿನಗಳಿಂದ ಗಮನ ಇರಿಸಿದ್ದ. ಹುಡುಗರನ್ನು ಬಿಟ್ಟು ರೇಖಿ ಮಾಡಿಸಿದ್ದ. ಚಿಕ್ಕಮಗಳೂರಿನ ಕಳಸಾದ ರಂಜಿತ್ ಹಾಗೂ ನಾಗರಾಜ್ 15 ದಿನಗಳಿಂದ ಸಫ್ವಾನ್ ಮನೆಯಲ್ಲೇ ಇದ್ದರು. ಸುಹಾಸ್ ಶೆಟ್ಟಿ ಬಜ್ಪೆಗೆ ಬರುವ ಬಗ್ಗೆ ಅಝರುದ್ಧಿನ್ ಮಾಹಿತಿ ನೀಡಿದ್ದ. ಎಷ್ಟು ಗಂಟೆಗೆ ಸುಹಾಸ್ ಹೊರಡುತ್ತಾನೆ, ಅವನೊಂದಿಗೆ ಯಾರಿದ್ದಾರೆ ಎಂಬುದನ್ನು ಸಫ್ವಾನ್​​ಗೆ ಮಾಹಿತಿ ನೀಡಿದ್ದ. ಸುಹಾಸ್ ಶೆಟ್ಟಿ ಹತ್ಯೆಯಾಗುತ್ತಿದ್ದಂತೆಯೇ ಅಝರುದ್ದೀನ್ ತಲೆ ಮರೆಸಿಕೊಂಡು ಪರಾರಿಯಾಗಿದ್ದಾನೆ. ಸದ್ಯ ಆತನ ಬಂಧನಕ್ಕೆ ಮಂಗಳೂರು ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

PFI ಕೈವಾಡ ಶಂಕೆ

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್​ಐ ನೇರ ಕೈವಾಡವಿದೆ ಎಂದ ವಿ‌ಎಚ್​ಪಿ ಮುಖಂಡ ಶರಣ್ ಪಂಪ್ವೆಲ್ ಕೂಡ ಆರೋಪಿಸಿದ್ದರು. ಮಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಈ ಹಿಂದೆ ನಡೆದ ಹಿಂದೂ ನಾಯಕರ ಹತ್ಯೆಗೂ ಇದಕ್ಕೂ ಸಾಮ್ಯತೆ ಇದೆ. ತರಬೇತಿ ಪಡೆದುಕೊಂಡು ಈ ಹತ್ಯೆ ಮಾಡಿದ್ದಾರೆ. ಆರೋಪಿ ಸಫ್ವಾನ್ ಪಿಎಎಫ್​​​ಐ ಕಾರ್ಯಕರ್ತನ ಮನೆಯಲ್ಲಿದ್ದ ಎಂದಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Fri, 9 May 25