ಗೋಪಾಲಯ್ಯ ಪತ್ನಿ ಜೆಡಿಎಸ್ನಿಂದ ಉಚ್ಚಾಟನೆ
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್ […]
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ.
ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ಕಾಂಗ್ರೆಸ್ನಿಂದ ನಾಲ್ವರ ಉಚ್ಚಾಟನೆ: ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಪರ ಕೆಲಸ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಸದಸ್ಯರನ್ನು 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ದೇವಸಂದ್ರ ವಾರ್ಡ್‌ನ ಕಾಂಗ್ರೆಸ್ ಕಾರ್ಪೊರೇಟರ್ ಶ್ರೀಕಾಂತ್, ಬಸವನಪುರ ವಾರ್ಡ್ ಕಾರ್ಪೊರೇಟರ್ ಜಯಪ್ರಕಾಶ್, ಎ.ನಾರಾಯಣಪುರ ವಾರ್ಡ್ ಕಾರ್ಪೊರೇಟರ್ ಸುರೇಶ್, ವಿಜ್ಞಾನ ನಗರ ವಾರ್ಡ್ ಕಾರ್ಪೊರೇಟರ್ ನಾಗರಾಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
Published On - 7:22 pm, Wed, 20 November 19