ಗೋಪಾಲಯ್ಯ ಪತ್ನಿ ಜೆಡಿಎಸ್​ನಿಂದ ಉಚ್ಚಾಟನೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್​ನಿಂದ ಉಚ್ಚಾಟನೆ ಮಾಡಲಾಗಿದೆ. ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್​ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್​. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್​ […]

ಗೋಪಾಲಯ್ಯ ಪತ್ನಿ ಜೆಡಿಎಸ್​ನಿಂದ ಉಚ್ಚಾಟನೆ
ಸಾಧು ಶ್ರೀನಾಥ್​

Updated on: Nov 20, 2019 | 7:31 PM

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರ ಪತ್ನಿ ಹೇಮಲತಾ ಗೋಪಾಲಯ್ಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಜೆಡಿಎಸ್​ನಿಂದ ಉಚ್ಚಾಟನೆ ಮಾಡಲಾಗಿದೆ.

ಪತಿ ಗೋಪಾಲಯ್ಯ ಪರ ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಹಾಲಿ ಸದಸ್ಯೆಯಾಗಿರುವ ಹೇಮಲತಾ ಗೋಪಾಲಯ್ಯ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಜೆಡಿಎಸ್​ ಸದಸ್ಯರಾದ ಎಂ.ಮಹಾದೇವ್ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಎನ್​. ಜಯರಾಮ್ ಅವರೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​​.ಕೆ.ಕುಮಾರಸ್ವಾಮಿ ಆದೇಶಿಸಿದ್ದಾರೆ.

ಕಾಂಗ್ರೆಸ್​ನಿಂದ ನಾಲ್ವರ ಉಚ್ಚಾಟನೆ:
ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್‌ ಪರ ಕೆಲಸ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಸದಸ್ಯರನ್ನು 6 ವರ್ಷಗಳ ಕಾಲ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ದೇವಸಂದ್ರ ವಾರ್ಡ್‌ನ ಕಾಂಗ್ರೆಸ್ ಕಾರ್ಪೊರೇಟರ್‌ ಶ್ರೀಕಾಂತ್‌, ಬಸವನಪುರ ವಾರ್ಡ್‌ ಕಾರ್ಪೊರೇಟರ್‌ ಜಯಪ್ರಕಾಶ್, ಎ.ನಾರಾಯಣಪುರ ವಾರ್ಡ್‌ ಕಾರ್ಪೊರೇಟರ್‌ ಸುರೇಶ್‌, ವಿಜ್ಞಾನ ನಗರ ವಾರ್ಡ್‌ ಕಾರ್ಪೊರೇಟರ್‌ ನಾಗರಾಜ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

Published On - 7:22 pm, Wed, 20 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us