AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​

2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್​ನ ಹಾಲಿ ಶಾಸಕ ರಾಜೇಗೌಡ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಂಚೆ ಮತ ಮರು ಎಣಿಕೆಯಲ್ಲಿ ಮತ್ತಷ್ಟು ಅಂತರ ಹೆಚ್ಚಿಸಿಕೊಳ್ಳುವ ನೀರಿಕ್ಷೆಯಲ್ಲಿದ್ದ ಶೃಂಗೇರಿ MLA ಟಿ.ಡಿ ರಾಜೇಗೌಡ ನಿರೀಕ್ಷೆ ಸಂಪೂರ್ಣ ತಲೆ ಕೆಳಗಾಗಿದೆ. ಕಾನೂನು ಹೋರಾಟದಲ್ಲಿ ಬಿಜೆಪಿಯ ಡಿಎನ್ ಜೀವರಾಜ್ ಜಯದ ಹೊಸ್ತಿಲಲ್ಲಿದ್ದಾರೆ. ಆದ್ರೆ, ಫಲಿತಾಂಶ ಪ್ರಕಟಿಸದ ಕಾರಣ ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್ ನೀಡಲಾಗಿದೆ. ಅಂಚೆ ಮತ ಮರು ಎಣಿಕೆಯ ವೇಳೆ ಇಡೀ ದಿನ ಏನೇನಾಯ್ತು ಎನ್ನುವ ವಿವರ ಇಲ್ಲಿದೆ.

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​
Rajegowda And Jeevaraj
ರಮೇಶ್ ಬಿ. ಜವಳಗೇರಾ
|

Updated on:May 03, 2026 | 7:00 PM

Share

ಬೆಂಗಳೂರು/ಚಿಕ್ಕಮಗಳೂರು) ಮೇ 03): ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (Sringeri assembly Re courting) ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. ಹೌದು.. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಅವರು ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಬಿಜೆಪಿಯ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಲೀಗಲ್​ ನೋಟಿಸ್ ನೀಡಿದ್ದಾರೆ.

ನ್ಯಾಯಾಂಗ ನಿಂದನೆ ಕೇಸ್ ಎಚ್ಚರಿಕೆ

ಕರ್ನಾಟಕ ಹೈಕೋರ್ಟ್ ಆದೇಶದಂತೆ ನಿನ್ನೆ (ಮೇ 02) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ಮತ್ತೊಮ್ಮೆ ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಮಾತ್ರ ಪ್ರಕಟಿಸಿಲ್ಲ. ಇದರಿಂದ ತಕ್ಷಣ ಫಲಿತಾಂಶ ಘೋಷಣೆ ಕೋರಿ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.​​ ಹೈಕೋರ್ಟ್ ಅಂಚೆ‌ ಮತಪತ್ರಗಳ ಎಣಿಕೆ ನಂತರ ಫಲಿತಾಂಶ ಘೋಷಿಸುವಂತೆ ಆದೇಶಿಸಿದೆ. ಆದರೆ ಫಲಿತಾಂಶ ಘೋಷಣೆ ವಿಳಂಬ ಮಾಡಲಾಗುತ್ತಿದೆ. ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಲೀಗಲ್ ನೋಟಿಸ್​​ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ನೋಡಿ: ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ

ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾ

ಫಲಿತಾಂಶವೇ ಈಗ ಅದಲುಬದಲಾಗೋ ಲಕ್ಷಣ ಕಾಣಿಸುತ್ತಿಲ್ಲ. ಯಾಕಂದ್ರೆ, ಕಳೆದ ಬಾರಿಯ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ನ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದುಬಿಗಿದ್ದರು. ಸ್ವಲ್ಪ ಮತಗಳ ಅಂತರದಿಂದ ಬಿಜೆಪಿಯ ಜೀವರಾಜ್ ಸೋತಿದ್ದರು. ಆದ್ರೆ ಅಂಚೆ ಮತಗಳಲ್ಲಿ ಹೆಚ್ಚು ಮತ ಪಡೆದಿದ್ದ ಜೀವರಾಜ್ ಅಸಿಂಧು ಆಗಿದ್ದ 279 ಮತಗಳನ್ನ ಮರು ಎಣಿಕೆ ಮಾಡುವಂತೆ ಪಟ್ಟು ಹಿಡಿದಿದ್ದರು. ಮನವಿಗೆ ಸ್ಪಂದಿಸದ ಅಂದಿನ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ರು. ಹೀಗಾಗಿ ಜೀವರಾಜ್ ಬೇರೆ ದಾರಿಯಿಲ್ಲದೆ ಕಾನೂನು ಹೋರಾಟ ನಡೆಸಿದ್ರು. ಸತತ ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಹೈ ಕೋರ್ಟ್ ಸೂಚನೆಯಂತೆ ನಿನ್ನೆ (ಮೇ 02) ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು. ಮತ ಎಣಿಕೆ ಆರಂಭವಾದಾಗಿನಿಂದ ಮುಗಿಯುವವರೆಗೂ ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾಗೆ ಎಡೆಮಾಡಿಕೊಟ್ಟಿತ್ತು. ಎರಡು ಪಕ್ಷಗಳ ನಾಯಕರು ತಾವೇ ಗೆದ್ದಿರೋದಾಗಿ ಘೋಷಿಸಿಕೊಂಡ್ರು. ಆದ್ರೆ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮತಚೋರಿಯ ತಿರುಗುಬಾಣ ಬಿಟ್ಟಿದ್ದಾರೆ. ಮತಚೋರಿ ಅಂತಿದ್ದವರಿಂದ್ಲೇ ಮತಗಳ್ಳತನ ನಡೆದಿದೆ ಎಂದು ಕೇಸರಿ ಪಡೆ ಆರೋಪ ಮಾಡ್ತಿದೆ. ಜೊತೆಜೊತೆಗೆ ಶೃಂಗೇರಿಯ ಫಲಿತಾಂಶವನ್ನ ಪ್ರಕಟಿಸದಂತೆ ತಡೆಯಲಾಗ್ತಿದೆ ಎಂದು ಆರೋಪಿಸಿದೆ.

ಆದ್ರೆ ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡು, ಅಪರಾಧ ಎಸಗಿದೆ. ಮತಗಳ ಟ್ಯಾಂಪರಿಂಗ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಫಲಿತಾಂಶ ಘೋಷಣೆ ಮಾಡದ ಸಂಬಂಧ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ, ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಘೋಷಿಸುವಂತೆ ಆದೇಶದಲ್ಲಿ ಇಲ್ಲ. ಹೀಗಾಗಿ ಮರು ಮತ ಎಣಿಕೆ ವಿವರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಮಾಜಾಷಿಯಿ ನೀಡಿದ್ದಾರೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ಘೋಷಿಸದ್ದಕ್ಕೆ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದ್ದು, ಮುಂದೆ ಏನಾಗಿದೆ ಎನ್ನುವುದ್ನು ಕಾದುನೋಡಬೇಕಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sun, 3 May 26

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!