AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಮೂಲಗಳ ಪ್ರಕಾರ ಹಾಲಿ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗಿಂತ ಪರಾಜಿತ ಅಭ್ಯರ್ಥಿ ಬಿಜೆಪಿಯ ಜೀವರಾಜ್ ಬಹುಮತ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸಿಲ್ಲ. ಇದರಿಂದ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದು, ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ
Pralhad Joshi
ರಮೇಶ್ ಬಿ. ಜವಳಗೇರಾ
|

Updated on: May 03, 2026 | 8:42 PM

Share

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ.

ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ ಮೂರು ವರ್ಷದಿಂದ ಶಾಸಕ ಸ್ಥಾನದಿಂದ ವಂಚಿತರಾಗಿದ್ದಾರೆ. ಫಲಿತಾಂಶ ಘೋಷಣೆಗೆ ಇನ್ನೂ ವಿಳಂಬ ಸಲ್ಲದು. ಚುನಾವಣಾಧಿಕಾರಿ ಯಾವುದೇ ಒತ್ತಡಕ್ಕೆ ಮಣಿಯದೆ ತತ್ ಕ್ಷಣವೇ ಅಂಚೆ ಮತ ಮರು ಎಣಿಕೆ ಫಲಿತಾಂಶವನ್ನು ಘೋಷಿಸಬೇಕು. ಮಾನ್ಯ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​

ಅಂಚೆ ಮತಗಳ ಮರು ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಚುನಾವಣಾಧಿಕಾರಿಯೇ (DEO) ಘೋಷಿಸಬೇಕೆಂದು ನ್ಯಾಯಾಲಯ ಸ್ಪಷ್ಟ ಆದೇಶ ನೀಡಿದೆ. ಅದರಂತೆ ಚುನಾವಣಾಧಿಕಾರಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ಜೋಶಿ ಆಗ್ರಹಿಸಿದ್ದಾರೆ.

ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್

ಕಾಂಗ್ರೆಸ್​ನ ಹಾಲಿ ಶಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, ಅಂಚೆ ಮತ ಮರು ಎಣಿಕೆಯಲ್ಲಿ ಮತ್ತಷ್ಟು ಅಂತರ ಹೆಚ್ಚಿಸಿಕೊಳ್ಳುವ ನೀರಿಕ್ಷೆಯಲ್ಲಿದ್ದ ಶೃಂಗೇರಿ MLA ಟಿ.ಡಿ ರಾಜೇಗೌಡ ನಿರೀಕ್ಷೆ ಸಂಪೂರ್ಣ ತಲೆ ಕೆಳಗಾಗಿದೆ. ಕಾನೂನು ಹೋರಾಟದಲ್ಲಿ ಬಿಜೆಪಿಯ ಡಿಎನ್ ಜೀವರಾಜ್ ಜಯದ ಹೊಸ್ತಿಲಲ್ಲಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ವಿಳಂಬ ಆಗ್ತಿದೆ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಡಿ.ಎನ್.ಜೀವರಾಜ್ ಪರ ವಕೀಲೆ ಡಾ.ವಂದನಾ ಪಿ.ಎಲ್.ರಿಂದ ನೋಟಿಸ್ ಕೊಟ್ಟಿದ್ದಾರೆ.

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ