ವಿಧಾನಪರಿಷತ್​​ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಕಾಂಗ್ರೆಸ್​​ಗೆ​ ಮುಖಭಂಗ

ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಾವು ರಂಗೇರಿದ್ದು, ಪಕ್ಷಾಂತರ ಪರ್ವ ರಾಜಕೀಯ ನಡೆಯುತ್ತಿದೆ. ಈ ಗದ್ದಲದ ಮಧ್ಯ ವಿಧಾನಪರಿಷತ್​ಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

ವಿಧಾನಪರಿಷತ್​​ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಕಾಂಗ್ರೆಸ್​​ಗೆ​ ಮುಖಭಂಗ
ಕಿಶೋರ್ ಕುಮಾರ್ ಬೊಟ್ಯಾಡಿ
Edited By:

Updated on: Oct 24, 2024 | 3:03 PM

ಮಂಗಳೂರು, (ಅಕ್ಟೋಬರ್ 24): ದಕ್ಷಿಣ ಕನ್ನಡ ಮತ್ತು ಉಡುಪಿ (Dakshina Kannada and Udupi) ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ (Council bypolls) ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು (Kishor Kumar Puttur )ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಮತ್ತೆ ಬಿಜೆಪಿ ಕಬಳಿಸುವಲ್ಲಿ ಯಶಸ್ವಿಯಾಗಿದೆ.

ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಉಪಚುನಾವಣೆ ನಡೆದಿದ್ದು, ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಎಣಿಕೆ ನಡೆದಿದ್ದು, ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು. ಇದರಲ್ಲಿ ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್​ಡಿಪಿಐ 195, ಪಕ್ಷೇತರ 9 ಮತ್ತು 90 ಅಸಿಂಧು ಮತಗಳಾಗಿವೆ. ಈ ಮೂಲಕ ಬಿಜೆಪಿಯ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದು, ಬಿಜೆಪಿ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 6,032 ಮತದಾರರಿದ್ದರು. ಇದರಲ್ಲಿ 5,906 ಮಂದಿ ಮತ ಚಲಾಯಿಸಿದ್ದರು. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದರು.

ಡಿಸೆಂಬರ್‌ 2021 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 3,672 ಮತ, ಮಂಜುನಾಥ ಭಂಡಾರಿ 2,079 ಮತ, ಎಸ್‌ಡಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು. ಈ ಮೂಲಕ ಅಂದು ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಕಂಡಿದ್ದರು. ಆದ್ರೆ, ಅವರು ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಸಂಸತ್​ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Published On - 2:51 pm, Thu, 24 October 24

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us