Mangala Angadi: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 3,986 ಮತಗಳ ರೋಚಕ ಗೆಲುವು
Belagavi By poll 2021 Results :ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
ಬೆಳಗಾವಿ: ಬೆಳಗಾವಿ ಬೈಎಲೆಕ್ಷನ್ನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 3,986 ಮತಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ್ದಾರೆ. 4,36,868 ಮತಗಳನ್ನು ಪಡೆದಿರುವ ಮಂಗಳಾ ಅಂಗಡಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿದ್ದು, ಸತೀಶ್ ಜಾರಕಿಹೊಳಿ 4,32,882 ಮತಗಳನ್ನು ಪಡೆದಿದ್ದಾರೆ. ಎಂಇಎಸ್ಗೆ 1,16,923 ಮತಗಳು ಚಲಾವಣೆಯಾಗಿದ್ದು, ಭರ್ಜರಿ ಪೈಪೋಟಿ ನೀಡಿದೆ.
ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ, ‘ಇದು ನನ್ನ ಗೆಲುವಲ್ಲ, ಬಿಜೆಪಿ ಕಾರ್ಯಕರ್ತರ ಗೆಲುವು. ಬಿಜೆಪಿ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮತ ನೀಡಿದ್ದಾರೆ. ಬೆಳಗಾವಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ’ ಎಂದು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
89ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಗೆಲುವು 3986ಮತಗಳಿಂದ ಗೆಲುವು ಪಡೆದಿದ್ದಾರೆ.
ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ ಸುರೇಶ್ ಅಂಗಡಿಯವರ ಯೋಜನೆಗಳನ್ನು ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರಂತೆಯೇ ಕೆಲಸ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಎಲ್ಲಾ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ ತಿಳಿಸಿದರು.
ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ತಿಳಿಸಿದ ಮಂಗಳಾ ಅಂಗಡಿ, ಒಂದು ಮತದಿಂದ ಗೆದ್ದರೂ ಸಹ ಅದು ಗೆಲುವೇ ಆಗಿತ್ತು. ಕೊವಿಡ್ ಇರುವುದರಿಂದ ಮತದಾನ ಕಡಿಮೆಯಾಗಿದೆ. ಹೀಗಾಗಿ ಬಿಜೆಪಿಗೆ ಮತಗಳು ಕಡಿಮೆ ಬಂದಿದೆ. ಗೋಕಾಕ್ ನನಗೆ ತವರು ಮನೆ, ಅಲ್ಲಿಯ ಮತದಾರರು ಮನೆಮಗಳನ್ನು ಬಿಟ್ಟುಕೊಡಲಿಲ್ಲ. ಬೆಳಗಾವಿ ದಕ್ಷಿಣ ಕ್ಷೇತ್ರದ ಜನರು ಹೆಚ್ಚು ಮತ ನೀಡಿದ್ದು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ಹೇಳಿದರು.
ಬೆಳಗಾವಿ ಬೈಎಲೆಕ್ಷನ್ನಲ್ಲಿ ಜಯ ಗಳಿಸಿದ ಮಂಗಳಾ ಅಂಗಡಿ ಚುನಾವಣಾ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಸಂಸದರಾಗಿ ಆಯ್ಕೆಯಾದ ಪ್ರಮಾಣ ಪತ್ರ ಸ್ವೀಕರಿಸಿದರು.
ಇದನ್ನೂ ಓದಿ: ಮಸ್ಕಿ ಕ್ಷೇತ್ರದಲ್ಲಿ ಒಗ್ಗಟ್ಟಿನ ಹೋರಾಟದಿಂದ ಗೆದ್ದಿದ್ದೇವೆ; ಬಸನಗೌಡ ತುರವಿಹಾಳ್
ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ (BJP candidate Mangala Angadi won by 3,986 votes in Belgaum lok sabha elections 2021)
Published On - 7:19 pm, Sun, 2 May 21