ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ವಿಚಾರವಾಗಿ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಕ್ಷದಿಂದ ದೂರು ಸಲ್ಲಿಸಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ಷೇಪಾರ್ಹ ಟ್ವೀಟ್ ವಿಚಾರವಾಗಿ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಕ್ಷದಿಂದ ದೂರು ಸಲ್ಲಿಸಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ವಿಚಾರವಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರನ್ನು ಉದ್ದೇಶಿಸಿ ಚೋರ್ ಗುರು ಚಾಂಡಲ್ ಶಿಷ್ಯ ಎಂದು ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದರು. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರಿಂದ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆಗೆ ಯತ್ನ: ವಶಕ್ಕೆ
ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ವಿಚಾರವಾಗಿ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಸದಾಶಿವನಗರದ ರಸ್ತೆಯಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ಸಂವಿಧಾನ ವಿರೋಧ ಪದ ಬಳಸಿದ್ದರಾ. ಚಾಂಡಲ್ ಎಂಬ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ತಕ್ಷಣ ಪ್ರಿಯಾಂಕ್ ಖರ್ಗೆಯನ್ನು ಬಂಧಿಸಿವಂತೆ ಆಗ್ರಹಿಸಿದ್ದಾರೆ.
The IT/ED raids and arrests of opposition leaders are nothing but BJP’s standard operating procedures to distract the public from real issues.
What were the enforcement agencies doing so long, awaiting orders from Chor Guru and Chandal Shishya?
Chronology samajhiye!…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 21, 2024
ಐಟಿ/ಇಡಿ ದಾಳಿಗಳು ಮತ್ತು ವಿರೋಧ ಪಕ್ಷದ ನಾಯಕರ ಬಂಧನವು ನೈಜ ಸಮಸ್ಯೆಗಳಿಂದ ಸಾರ್ವಜನಿಕರನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯ ಪ್ರಮಾಣಿಕ ಕಾರ್ಯ ವಿಧಾನವಾಗಿದೆ. ಚೋರ್ ಗುರು ಮತ್ತು ಚಂಡಾಲ್ ಶಿಷ್ಯರಿಂದ ಆದೇಶಕ್ಕಾಗಿ ಕಾಯುತ್ತಿರುವ ಜಾರಿ ಸಂಸ್ಥೆಗಳು ಇಷ್ಟು ದಿನ ಏನು ಮಾಡುತ್ತಿದ್ದವು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.