ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಭರಾಟೆ, ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಿನೇಷನ್
ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಶುಭ ಸೋಮವಾರದಂದು ಅದೃಷ್ಟ ಪರೀಕ್ಷೆ ಶುರುವಾಗಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಅಭ್ಯರ್ಥಿಗಳು: -ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಎನ್. ಜವರೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. -ಶಿವಾಜಿನಗರದಿಂದ ಬಿಜೆಪಿ ಅಭ್ಯರ್ಥಿ ಶರವಣ ನಾಮಿನೇಷನ್ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ […]
ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಶುಭ ಸೋಮವಾರದಂದು ಅದೃಷ್ಟ ಪರೀಕ್ಷೆ ಶುರುವಾಗಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಅಭ್ಯರ್ಥಿಗಳು: -ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಎನ್. ಜವರೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. -ಶಿವಾಜಿನಗರದಿಂದ ಬಿಜೆಪಿ ಅಭ್ಯರ್ಥಿ ಶರವಣ ನಾಮಿನೇಷನ್ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಉಮೇದುವಾರಿಕೆ -ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್ ನಾಮಪತ್ರ ಸಲ್ಲಿಸಲಿದ್ದಾರೆ. -ಕೆ.ಆರ್.ಪುರಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್, ಕಾಂಗ್ರೆಸ್ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ನಾಮಿನೇಷನ್. -ಬಳ್ಳಾರಿಯ ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ -ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್. ವಿಶ್ವನಾಥ್ -ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್. ಬನ್ನಿಕೋಡ್ ನಾಮಿನೇಷನ್. -ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಮತ್ತು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ನಾಮಪತ್ರ ಸಲ್ಲಿಸಲಿದ್ದಾರೆ. -ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ, ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ ನಾಳೆ ನಾಮಪತ್ರ ಸಲ್ಲಿಕೆ. -ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಾಮಪತ್ರ ಸಲ್ಲಿಸಲಿದ್ದಾರೆ. -ಗೋಕಾಕ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ನಾಳೆ ನಾಮಿನೇಷನ್ ಸಲ್ಲಿಸಲಿದ್ದಾರೆ. -ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ -ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್, ಜೆಡಿಎಸ್ ಅಭ್ಯರ್ಥಿ ಚೈತ್ರಾಗೌಡ -ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
Published On - 7:07 pm, Sun, 17 November 19