ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಭರಾಟೆ, ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಿನೇಷನ್

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಶುಭ ಸೋಮವಾರದಂದು ಅದೃಷ್ಟ ಪರೀಕ್ಷೆ ಶುರುವಾಗಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಅಭ್ಯರ್ಥಿಗಳು: -ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಎನ್. ಜವರೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. -ಶಿವಾಜಿನಗರದಿಂದ ಬಿಜೆಪಿ ಅಭ್ಯರ್ಥಿ ಶರವಣ ನಾಮಿನೇಷನ್ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ […]

ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಭರಾಟೆ, ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಿನೇಷನ್
ಸಾಧು ಶ್ರೀನಾಥ್​

Updated on: Nov 18, 2019 | 7:14 AM

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ನಾಳೆ ಬೈಎಲೆಕ್ಷನ್ ಅಖಾಡದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಶುಭ ಸೋಮವಾರದಂದು ಅದೃಷ್ಟ ಪರೀಕ್ಷೆ ಶುರುವಾಗಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಅಭ್ಯರ್ಥಿಗಳು:
-ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಎನ್. ಜವರೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
-ಶಿವಾಜಿನಗರದಿಂದ ಬಿಜೆಪಿ ಅಭ್ಯರ್ಥಿ ಶರವಣ ನಾಮಿನೇಷನ್ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಉಮೇದುವಾರಿಕೆ
-ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್ ನಾಮಪತ್ರ ಸಲ್ಲಿಸಲಿದ್ದಾರೆ.
-ಕೆ.ಆರ್.ಪುರಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್, ಕಾಂಗ್ರೆಸ್ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ನಾಮಿನೇಷನ್.
-ಬಳ್ಳಾರಿಯ ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್
-ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್. ವಿಶ್ವನಾಥ್
-ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್. ಬನ್ನಿಕೋಡ್ ನಾಮಿನೇಷನ್.
-ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಮತ್ತು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ನಾಮಪತ್ರ ಸಲ್ಲಿಸಲಿದ್ದಾರೆ.
-ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ, ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ ನಾಳೆ ನಾಮಪತ್ರ ಸಲ್ಲಿಕೆ.
-ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಾಮಪತ್ರ ಸಲ್ಲಿಸಲಿದ್ದಾರೆ.
-ಗೋಕಾಕ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ನಾಳೆ ನಾಮಿನೇಷನ್ ಸಲ್ಲಿಸಲಿದ್ದಾರೆ.
-ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್
-ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್, ಜೆಡಿಎಸ್ ಅಭ್ಯರ್ಥಿ ಚೈತ್ರಾಗೌಡ
-ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ ಹಾಗೂ ಜೆಡಿಎಸ್​​ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

Published On - 7:07 pm, Sun, 17 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us