ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ಗಲಾಟೆ: ಬಿಜೆಪಿಯ ಮೂವರು, ಕಾಂಗ್ರೆಸ್​ನ ಇಬ್ಬರು ಆಸ್ಪತ್ರೆಗೆ; ಬಳಿಕ ಎರಡೂ ಪಕ್ಷದವರ ಪ್ರತಿಭಟನೆ

| Updated By: Skanda

Updated on: Jul 06, 2021 | 8:38 AM

ಎರಡೂ ಪಕ್ಷದವರು ಘರ್ಷಣೆಯನ್ನು ಖಂಡಿಸಿ ತಡರಾತ್ರಿ ವೇಳೆಗೆ ಪ್ರತಿಭಟನೆ ನಡೆಸಿದ್ದು ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆ ಪ್ರತಿಭಟನೆ ಮುಗಿಯುತ್ತಿದ್ದಂತೆಯೇ ತಾಲ್ಲೂಕು ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ಗಲಾಟೆ: ಬಿಜೆಪಿಯ ಮೂವರು, ಕಾಂಗ್ರೆಸ್​ನ ಇಬ್ಬರು ಆಸ್ಪತ್ರೆಗೆ; ಬಳಿಕ ಎರಡೂ ಪಕ್ಷದವರ ಪ್ರತಿಭಟನೆ
ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ಪ್ರತಿಭಟನೆ
Follow us on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ ಬಳಿಕ ಬಿಜೆಪಿ ಮುಖಂಡ ಬಾಳೆಬೈಲು ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೊರೊನಾ ಲಸಿಕೆ ಹಾಕಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಗಲಾಟೆ ರಾಜಕೀಯ ತಿರುವು ಪಡೆಯುತ್ತಿದ್ದಂತೆಯೇ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆಯೂ ನಡೆದಿದೆ. ಘರ್ಷಣೆಯ ಪರಿಣಾಮ ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ, ಯಶಸ್ವಿ ಹಾಗೂ ಸುಮಂತ ಮತ್ತು ಕಾಂಗ್ರೆಸ್​ ಪಕ್ಷದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಸದಸ್ಯ ನಮೃತ್ ಮತ್ತು ಸುಭಾಷ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಳಿಕ ಎರಡೂ ಪಕ್ಷದವರು ಘರ್ಷಣೆಯನ್ನು ಖಂಡಿಸಿ ತಡರಾತ್ರಿ ವೇಳೆಗೆ ಪ್ರತಿಭಟನೆ ನಡೆಸಿದ್ದು ಮೊದಲು ಕಾಂಗ್ರೆಸ್​ ನಾಯಕ, ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆ ಪ್ರತಿಭಟನೆ ಮುಗಿಯುತ್ತಿದ್ದಂತೆಯೇ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಘರ್ಷಣೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಕೆಲವೆಡೆ ಕೊರೊನಾ ಲಸಿಕೆ ವಿತರಣೆ ವಿಚಾರದಲ್ಲಿ ಬೇರೆಬೇರೆ ಪಕ್ಷಗಳ ಕಾರ್ಯಕರ್ತರು ರಾಜಕೀಯ ಎಳೆದುತಂದು ಗಲಾಟೆ ನಡೆಸಿದ ಉದಾಹರಣೆಗಳು ದೇಶದ ವಿವಿಧೆಡೆ ದಾಖಲಾಗಿವೆ. ಕೊರೊನಾ ಎರಡನೇ ಅಲೆ ಪ್ರಭಾವ ತಗ್ಗಿದಂತೆ ಕಾಣುತ್ತಿದ್ದರೂ ಡೆಲ್ಟಾ ರೂಪಾಂತರಿ ಹಾಗೂ ಸಂಭವನೀಯ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆಯ ಮಾತುಗಳನ್ನಾಡಿರುವುದರಿಂದ ಲಸಿಕೆ ವಿತರಣೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲೂ ರಾಜಕೀಯ ಬೆರೆಸಿ ಕಿತ್ತಾಡಿಕೊಳ್ಳುತ್ತಿರುವುದು ವಿಷಾದನೀಯ.

ಇದನ್ನೂ ಓದಿ:
ಕೊರೊನಾ ಲಸಿಕೆ ನೀಡುವುದಾಗಿ ಮಂಗಳೂರಲ್ಲಿ ರಾತ್ರೋರಾತ್ರಿ 85 ಮಹಿಳೆಯರ ಸಾಗಾಟ; ತನಿಖೆ ವೇಳೆ ಬಯಲಾಯ್ತು ಮೆಡಿಕಲ್​ ಕಾಲೇಜುಗಳ ಅಕ್ರಮ 

ಸಾಂಕ್ರಾಮಿಕ ರೋಗದ ಹೊತ್ತಲ್ಲಿ ರಾಜಕೀಯ ಮಾಡಬೇಡಿ: ಆರೋಗ್ಯ ಸಚಿವ ಹರ್ಷವರ್ಧನ್ ಟ್ವೀಟ್