ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಮುಕ್ತಾಯ; ಕೊರೊನಾ ನಿರ್ವಹಣೆ, ಉಪಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ
ಆಕ್ಸಿಜನ್ ಸರಬರಾಜು ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಹ್ಲಾದ್ ಜೋಶಿ ಹಾಗೂ ಸದಾನಂದಗೌಡ ಕಾರ್ಯನಿರ್ವಹಣೆ ಮಾಡುತ್ತಾರೆ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು: ವರ್ಚುಯಲ್ ವಿಧಾನದ ಮೂಲಕ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಮುಕ್ತಾಯಗೊಂಡಿದೆ. ಸತತ ಎರಡು ಗಂಟೆಗಳ ಕಾಲ ನಡೆದಿದ್ದ ಸಭೆಯಲ್ಲಿ ಕೊರೊನಾ ನಿರ್ವಹಣೆ, ಉಪಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಲಕ್ಷಗಳ ಅಂತರ ಸಾವಿರಕ್ಕೆ ಇಳಿದಿದ್ದು ಹೇಗೆ, ಮಸ್ಕಿಯಲ್ಲಿ ಸೋತಿದ್ದು ಯಾಕೆ ಎಂದು ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರಶ್ನೆ ಮಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಳಗಾವಿಯಲ್ಲಿ ಮರಾಠ ಮತಗಳು ಸಮಸ್ಯೆಯಾಯ್ತು. ಪಕ್ಷದ ಕೆಲ ನಾಯಕರು ಸರಿಯಾಗಿ ಕೆಲಸ ನಿರ್ವಹಿಸಲಿಲ್ಲ ಎಂದು ಅರುಣ್ ಸಿಂಗ್ ಪ್ರಶ್ನೆಗೆ ಸಚಿವ ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ. ಕೊರೊನಾ ನಿರ್ವಹಣೆ ಮತ್ತಷ್ಟು ಬಲಗೊಳ್ಳಬೇಕೆಂದು ಕೂಡ ಸಭೆಯಲ್ಲಿ ಚರ್ಚೆ ನಡೆದಿದೆ. ಆಕ್ಸಿಜನ್ ವ್ಯವಸ್ಥೆ ವಿಚಾರದ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆಯಾಗಿದೆ.
ಆಕ್ಸಿಜನ್ ಸರಬರಾಜು ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಹ್ಲಾದ್ ಜೋಶಿ ಹಾಗೂ ಸದಾನಂದಗೌಡ ಕಾರ್ಯನಿರ್ವಹಣೆ ಮಾಡುತ್ತಾರೆ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಹತ್ತು ದಿನಗಳೊಳಗೆ ವ್ಯವಸ್ಥೆ ಸ್ಟ್ರೀಮ್ಲೈನ್ ಮಾಡುತ್ತೇನೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಭೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ ಬಗೆಗಿನ ಚರ್ಚೆ ವೇಳೆ, ಮಸ್ಕಿಯಲ್ಲಿ ಅಭ್ಯರ್ಥಿಗೆ ವರ್ಚಸ್ಸು ಇರಲಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಮಾಹಿತಿ ದೊರಕಿದೆ. ಬೆಳಗಾವಿಯಲ್ಲಿ ಮರಾಠಾ ಮತಗಳು ಸಮಸ್ಯೆಯಾಯ್ತು, ಪಕ್ಷದ ಕೆಲವು ನಾಯಕರು ಸರಿಯಾಗಿ ಜವಾಬ್ದಾರಿ ನಿರ್ವಹಿಸಲಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಪುದುಚೇರಿಯಲ್ಲಿ ಬಿಜೆಪಿ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಉಸ್ತುವಾರಿ ಆಗಿದ್ದ ಕೋರ್ ಕಮಿಟಿ ಸದಸ್ಯ ನಿರ್ಮಲ್ ಕುಮಾರ್ ಸುರಾನಾ ತಂಡಕ್ಕೆ ಸಭೆಯಲ್ಲಿ ಅಭಿನಂದನೆ ತಿಳಿಸಲಾಗಿದೆ. ತಮಿಳುನಾಡಿನಲ್ಲಿ ನಾಲ್ಕು ಸ್ಥಾನಗಳ ಗೆಲುವಿಗೆ ಬಿಜೆಪಿ ಉಸ್ತುವಾರಿ ಸಿ.ಟಿ. ರವಿ ಅವರನ್ನು ಸಭೆಯಲ್ಲಿ ಅಭಿನಂದಿಸಲಾಗಿದೆ.
ಇದನ್ನೂ ಓದಿ: ಲಾಕ್ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ
Published On - 11:03 pm, Sat, 8 May 21