AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮೂರು ಪ್ರಮುಖ ನಿರ್ಣಯ ಸಾಧ್ಯತೆ

ದಾವಣಗೆರೆಯಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸುಮಾರು 570 ಮಂದಿ ಭಾಗಿಯಾಗುವ ಸಾಧ್ಯತೆಯಿದೆ.

ದಾವಣಗೆರೆಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮೂರು ಪ್ರಮುಖ ನಿರ್ಣಯ ಸಾಧ್ಯತೆ
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Updated By: ಸುಷ್ಮಾ ಚಕ್ರೆ|

Updated on: Sep 19, 2021 | 8:05 AM

Share

ದಾವಣಗೆರೆ: ದಾವಣಗೆರೆಯಲ್ಲಿ ನಿನ್ನೆಯಿಂದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಕಾರ್ಯಕಾರಿಣಿ ಸಭೆ ಈ ಬಾರಿ ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ನಡೆಯುತ್ತಿದೆ. ಇಂದು ಬೆಳಗ್ಗೆ 10.15ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪಕ್ಷದ ಧ್ವಜಾರೋಹಣ ಮಾಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕಾರಿಣಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಗಮಿಸಬೇಕಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರ ಆಗಮನ ರದ್ದಾಗಿದೆ.

ವರ್ಷಗಳ ಬಳಿಕ ದಾವಣಗೆರೆಯಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸುಮಾರು 570 ಮಂದಿ ಭಾಗಿಯಾಗುವ ಸಾಧ್ಯತೆಯಿದೆ. ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಜ್ಯದ ಪದಾಧಿಕಾರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಎರಡರಿಂದ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಬೆಳಿಗ್ಗೆ 10ಕ್ಕೆ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರಿಂದ ಧ್ವಜಾರೋಹಣವಿರಲಿದೆ. ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಮೊದಲನೇ ಅವಧಿಯಲ್ಲಿ ಕಾರ್ಯಕಾರಿಣಿ ನಿರ್ಣಯಗಳ ಮಂಡನೆ- ಚರ್ಚೆ ನಡೆಯಲಿದೆ. ಹಿಂದಿನ ಕಾರ್ಯಕಾರಿಣಿಯ ನಿರ್ಣಯಗಳು, ಬಳಿಕ ನಡೆದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಸೇವಾ ಹೀ ಸಂಘಟನೆ, ಸೇವಾ ಸಮರ್ಪಣೆ ಅಭಿಯಾನ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನದ ನಂತರ ಸಂಘಟನಾ ಪ್ರಧಾನ ಕಾರ್ಯದರ್ಶಿಯವರಿಂದ ಮುಂದಿನ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನವಿರಲಿದೆ. ಸೇವೆ ಮತ್ತು ಸಮರ್ಪಣೆಗೆ ನಮೋ ಆ್ಯಪ್ ಬಳಕೆ ಕುರಿತು ಮಾಹಿತಿ ನೀಡಲಾಗುವುದು. ವಿಧಾನ ಪರಿಷತ್ ಚುನಾವಣೆಗೆ ತಕ್ಷಣವೇ ಪ್ರಚಾರಕ್ಕೆ ಇಳಿಯುವ ಕುರಿತು ಹಲವು ಸೂಚನೆಗಳನ್ನು ನೀಡಲಾಗುವುದು.

ದಾವಣಗೆರೆ ಖಾಸಗಿ ರೆಸಾರ್ಟ್​ನಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯುತ್ತಿದೆ. ನಿನ್ನೆಯಿಂದಲೇ ದಾವಣಗೆರೆಯಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಮುಂದಿನ ಚುನಾವಣೆಗೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. 2023ರ ಚುನಾವಣೆಯಲ್ಲಿ ಬಹುಮತ ಪಡೆಯಲು ಸಿದ್ಧತೆ ನಡೆಸಲಾಗಿದೆ. ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ನಿನ್ನೆ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು. ವಾರಣಾಸಿಯಲ್ಲಿ ಬಿಜೆಪಿ ಎಸ್.ಸಿ‌ ಮೋರ್ಛಾ ರಾಜ್ಯಾಧ್ಯಕ್ಷರುಗಳ ಸಭೆ ನಡೆಯುತ್ತಿರುವ ಕಾರಣ ಕೋರ್ ಸಮಿತಿ ಸಭೆಗೆ ಸಿ.ಟಿ. ರವಿ ಗೈರು ಹಾಜರಾಗಲಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಿಲ್ಲ; ಬಿಜೆಪಿ ಕೋರ್ ಸಮಿತಿ ಸಭೆಗೂ ಮುನ್ನ ಸದಾನಂದ ಗೌಡ ಸ್ಪಷ್ಟನೆ 

ರಾಜಕೀಯದಿಂದ ದೂರ ಸರಿಯುವುದಾಗಿ ಘೋಷಿಸಿದ್ದ ಬಿಜೆಪಿ ಮಾಜಿ ನಾಯಕ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ

(BJP Core Committee Meeting to be Held in Davanagere Private Resort Today BS Yediyurappa, Basavaraj Bommai)

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ