ಕರ್ನಾಟಕ ಕಾಂಗ್ರೆಸ್​ನ ಇಬ್ಬರು ಸಂಸದರ ಆಯ್ಕೆ ಅಸಿಂಧು ಕೋರಿ ಕೋರ್ಟ್​ಗೆ ಅರ್ಜಿ

ಲೋಕಸಭಾ ಚುನಾವಣೆ ಮುಗಿದಿದ್ದು ಆಯ್ತು. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸರ್ಕಾರ ರಚನೆ ಆಗಿದ್ದು ಆಯ್ತು. ಆದ್ರೆ, ಇದೀಗ ಕರ್ನಾಟಕದಲ್ಲಿ ಇಬ್ಬರು ಕಾಂಗ್ರೆಸ್​ ಸಂಸದರ ಆಯ್ಕೆ ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿಗಳು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್​ನ ಇಬ್ಬರು ಸಂಸದರ ಆಯ್ಕೆ ಅಸಿಂಧು ಕೋರಿ ಕೋರ್ಟ್​ಗೆ ಅರ್ಜಿ
ಹೈಕೋರ್ಟ್​
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Jul 18, 2024 | 8:16 PM

ಬೆಂಗಳೂರು, (ಜುಲೈ 18): ಕರ್ನಾಟಕ ಕಾಂಗ್ರೆಸ್​​​ನ ಇಬ್ಬರು ಸಂಸದರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಬಿಜೆಪಿ ನಾಯಕರು ಕೋರ್ಟ್​ ಮೆಟ್ಟಿಲೇರಿದ್ದಾರೆ. ದಾವಣಗೆರೆ ಲೋಕಸಭಾ ಕಾಂಗ್ರೆಸ್​ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮತ್ತು ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಾಟೀಲ್ ಆಯ್ಕೆ ಅಸಿಂಧುಗೊಳಿಸಬೇಕೆಂದು ಪರಾಜಿತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಡಾ.ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಅರ್ಜಿ

ದಾವಣಗೆರೆ ಲೋಕಸಭಾ ಕಾಂಗ್ರೆಸ್ ಸಂಸದೆಯಾಗಿ ಆಯ್ಕೆಯಾಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಜಿ.ಎಸ್.ಗಾಯತ್ರಿ ಸಿದ್ದೇಶ್ವರ ಅವರು ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್​​ನ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಚುನಾವಣೆ ವೇಳೆ ಮಹಿಳೆಯರಿಗೆ 1 ಲಕ್ಷ ರೂಪಾಯಿ ಗ್ಯಾರಂಟಿ ಕಾರ್ಡ್ ವಿತರಿಸಿದ್ದಾರೆ. ಮತದಾರರಿಗೆ ಲಂಚದ ಆಮಿಷವೊಡ್ಡಿದ್ದಾರೆ. ಹೀಗಾಗಿ ಅವರು ಚುನಾವಣೆಯಲ್ಲಿ ಅಕ್ರಮದಿಂದ ಆಯ್ಕೆಯಾಗಿದ್ದಾರೆಂದು ಘೋಷಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೋಹನ್​​ದಾಸ್​ ಪೈ ವಿರುದ್ಧ ನಾರಾಯಣಗೌಡ ಕಿಡಿ: ಮೀಸಲಾತಿ ವಿಧೇಯಕ ಮಂಡನೆಗೆ ಸರ್ಕಾರಕ್ಕೆ 15 ದಿನ ಗಡುವು

ಈ ಬಾರಿ ದಾವಣಗೆರೆ ಲೋಕಸಭಾ ಚುನಾವಣೆಗೆ ಹಾಲಿ ಸಂಸದರಾಗಿದ್ದ ಜಿಎಂ ಸಿದ್ದೇಶ್ವರ್ ಅವರ ಪತ್ನಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಇವರ ವಿರುದ್ಧವಾಗಿ ಕಾಂಗ್ರೆಸ್​​ನಿಂದ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜು ಅವರು ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದಾರೆ.

ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಚುನಾವಣಾ ತಕರಾರು ಅರ್ಜಿ

ಇನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್​​ ಶ್ರೇಯಸ್ ಪಾಟೀಲ್​ ವಿರುದ್ಧ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಎನ್ನುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಶ್ರೇಯಸ್ ಪಾಟೀಲ್​ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಘೋಷಿಸುವಂತೆ ಹೈಕೋರ್ಟ್​ಗೆ ಅರ್ಜಿ ಹಾಕಿದ್ದಾರೆ. ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಎಂ. ಪಟೇಲ್ ಆಯ್ಕೆ ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದಾರೆ.

ಈಗ ಶ್ರೇಯಸ್ ಪಾಟೀಲ್​ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಸಿರುವ ಡಿ.ಚರಣ್  ಅವರ ತಂದೆ ದೇವರಾಜೇಗೌಡ ಅವರು ಈ ಹಿಂದಿನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಚುನಾವಣಾ ಆಯೋಗ, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್​, ಪ್ರಜ್ವಲ್ ರೇವಣ್ಣ ಅವರ ಅವಧಿ ಇನ್ನೇನು ಒಂದು ವರ್ಷ ಬಾಕಿ ಇರುವಾಗಲೇ ಅವರ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು.

ಆದ್ರೆ, ಹೈಕೋರ್ಟ್​ ಅಸಿಂಧು ಆದೇಶ ವಿರುದ್ಧ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್​ ಸಹ ಪ್ರಜ್ವಲ್​ ಅವರ ಮನವಿಯನ್ನು ಪುರಸ್ಕರಿಸಿ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು