ಬಿಜೆಪಿಯಿಂದ ಶಾಸಕ್ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಬಿಜೆಪಿ ಹೈಕಮಾಂಡ್ ಮೇಲೆ ಆರು ವರ್ಷಗಳ ಕಾಲ ಉಚ್ಚಾಟಿಸಿದೆ. ಇಬ್ಬರೂ ಕಾಂಗ್ರೆಸ್ ಪಕ್ಷದೊಂದಿಗೆ ಹೆಚ್ಚು ಗುರುತಿಸಿಕೊಂಡಿದ್ದರು ಎಂಬ ಆರೋಪವಿದೆ. ಈ ನಿರ್ಧಾರಕ್ಕೆ ಹೆಬ್ಬಾರ್ ಪ್ರತಿಕ್ರಿಯಿಸಿದ್ದು, ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಉಚ್ಚಾಟನೆಯನ್ನು ಸ್ವಾಗತಿಸಿದ್ದಾರೆ.

ಬಿಜೆಪಿಯಿಂದ ಶಾಸಕ್ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ
St Somashekhar
Updated By: ರಾಜೇಶ್ ದುಗ್ಗುಮನೆ

Updated on: May 27, 2025 | 1:43 PM

ಶಾಸಕರಾದ ಶಿವರಾಮ್ ಹೆಬ್ಬಾರ್ (Shivaram Hebbar) ಹಾಗೂ ಎಸ್​ಟಿ ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.

ಇದನ್ನೂ ಓದಿ
ನಮ್ಮ ಮೆಟ್ರೋ ಯೆಲ್ಲೋ ಮಾರ್ಗ ಕಾರ್ಯಾರಂಭ ಮತ್ತೆ ವಿಳಂಬ
ಪೊಲೀಸರನ್ನೂ ಅವಾಚ್ಯ ಪದಗಳಿಂದ ನಿಂದಿಸಿದ ಪುಡಿರೌಡಿ
ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಪರಮೇಶ್ವರ್ ಎಚ್ಚರಿಕೆ
ಬಾಣಂತಿಯರು, ಮಕ್ಕಳು, ವಯಸ್ಸಾದವರು, ರೋಗಿಗಳು ಮಾಸ್ಕ್​ ಧರಿಸಬೇಕು: ದಿನೇಶ್

ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದೆ.

ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ

ಉಚ್ಚಾಟನೆ ಬೆನ್ನಲ್ಲೇ ಮಾತನಾಡಿರುವ ಹೆಬ್ಬಾರ್​, ‘ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ನಾನು ಹೇಳುತ್ತೇನೆ. ಪಕ್ಷದ ವಿರುದ್ಧ ನಾನು ಮಾತನಾಡಲು ಕಾರಣ ಏನೆಂದು ತಿಳಿಸುತ್ತೇನೆ. ನನ್ನ ಮುಂದಿನ ತೀರ್ಮಾನದ ಬಗ್ಗೆ ಕಾದು ನೋಡಿ’ ಎಂದು ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ಓದಿ:  ಶಿವರಾಮ್ ಹೆಬ್ಬಾರ್​ ಸಮಸ್ಯೆ ಏನೆಂದು ಗೊತ್ತಾಗುತ್ತಿಲ್ಲ, ಬಾಯಿ ಬಿಟ್ಟು ಹೇಳಬೇಕಲ್ವಾ: ರೂಪಾಲಿ ನಾಯ್ಕ್

‘ಯಾವುದೇ ಸಭೆ, ಸಮಾರಂಭಗಳಿಗೆ ನನ್ನನ್ನು ಕರೆಯುತ್ತಿರಲಿಲ್ಲ. ಸಭೆ, ಸಮಾರಂಭಗಳಿಗೆ ಕರೆಯದಿದ್ದರೆ ಹೋಗಲು ಆಗುತ್ತಾ? ಮುಂದಿನ ವಾರ ಬೆಂಗಳೂರಿಗೆ ಬಂದು ಎಲ್ಲವನ್ನೂ ಹೇಳುತ್ತೇನೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಉಚ್ಚಾಟನೆ ಸ್ವಾಗತಿಸಿದ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಹೇಳಿಕೆ ನೀಡಿದ್ದಾರೆ. ‘ಹೆಬ್ಬಾರ್, ಎಸ್​ಟಿ ಸೋಮಶೇಖರ್ ಏನು ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡಿದ್ದಾರೆ ಎಂದು ಅವರಿಗೂ ಗೊತ್ತಿದೆ. ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಇದರ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ತಲೆ ಕೆಡಿಸಿಕೊಳ್ಳುವುದು ಬೇಡ. ಉಚ್ಛಾಟನೆಯನ್ನು ನಾನು ಸ್ವಾಗತ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೂ (ಶಿವರಾಂ ಹಾಗೂ ಸೋಮಶೇಖರ್) ಕೂಡಾ ಅವಕಾಶ ಸಿಕ್ಕಿತ್ತು.ಆದರೆ ವಿಪಕ್ಷದಲ್ಲಿ ಕೂರಬೇಕಾದ ಅವರಿಗೆ ಕಷ್ಟ ಆಯಿತು’ ಎಂದಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 1:17 pm, Tue, 27 May 25