ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ. ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ […]
Follow us on
ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ.
ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ ಮಾಮನಿ ರೇಸ್ನಲ್ಲಿದ್ದಾರೆ. ಹಾಗಾಗಿ ಪ್ರಸಕ್ತ ಅಧಿವೇಶನದಲ್ಲಿ ಹಾಲಿ ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ರಾಜೀನಾಮೆ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.