ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ ಬಿಜೆಪಿ

| Updated By: Rakesh Nayak Manchi

Updated on: Sep 22, 2023 | 6:26 PM

ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ ಬಿಜೆಪಿ
ಯತೀಂದ್ರ ಸಿದ್ದರಾಮಯ್ಯ ಮತ್ತು ಎನ್ ರವಿಕುಮಾರ್
Follow us on

ಬೆಂಗಳೂರು, ಸೆ.22: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.

ದೂರು ನೀಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ, ದೇಶಕ್ಕೆ ಸಿದ್ದರಾಮಯ್ಯ ನೀತಿ ಹೇಳುತ್ತಾರೆ, ನಾನೇ ಶ್ರೇಷ್ಠ ಅಂತಾರೆ. ಆದರೆ ಅವರೇ ವರುಣಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ, ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದರು.

ಇದನ್ನೂ ಓದಿ: ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾತು ವೈರಲ್: ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ದರಾಮಯ್ಯ

ಮಡಿವಾಳ ಸಮುದಾಯಕ್ಕೆ ಐರನ್ ಬಾಕ್ಸ್ ಮತ್ತು ಮನೆ ಮನೆಗೆ ಕುಕ್ಕರ್ ಕೊಟ್ಟಿದ್ದೇವೆ, ಜತೆಗೆ ಹಣವನ್ನೂ ಕೊಟ್ಟಿದ್ದೇವೆ ಅಂತ ಯತೀಂದ್ರ ಅವರೇ ಭಾಷಣ ಮಾಡಿದ್ದಾರೆ. ಈ ವೀಡಿಯೋ ತುಣುಕು ರಾಜ್ಯಾದ್ಯಂತ ವೈರಲ್ ಆಗಿದೆ ಎಂದರು.

ಸಿದ್ದರಾಮಯ್ಯ ಮತದಾರರಿಗೆ ಆಮಿಷ ಒಡ್ಡಿ ಮತ ಹಾಕಿಸಿಕೊಂಡು ನಿಯಮ ಉಲ್ಲಂಘಿಸಿದ್ದಾರೆ. ಈ ಸಂಬಂಧ ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ. ಶಾಸಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವಂತೆ ಚುನಾವಣಾ ಆಯೋಗ ನಿರ್ದೇಶನ ಕೊಡಬೇಕೆಂದು ಮನವಿ ಮಾಡಿದ್ದೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ