AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿಬ್ಬರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಡಿ.ಸುಧಾಕರ್​ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸ್ವಾಗತ ವಿಚಾರವಾಗಿ ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘನೆ ಆರೋಪ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿಬ್ಬರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ
ಬಿಜೆಪಿ ನಾಯಕರಿಗೆ ತಟ್ಟಿದ ಉತ್ತರ ಕರ್ನಾಟಕದ ಬಿಸಿಲಿನ ಝಳ, 1 ಗಂಟೆ ಮತದಾನದ ಅವಧಿ ವಿಸ್ತರಣೆಗೆ ಮನವಿ
TV9 Web
| Edited By: |

Updated on: Apr 15, 2024 | 6:20 PM

Share

ಬೆಂಗಳೂರು, ಏಪ್ರಿಲ್​ 15: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಡಿ.ಸುಧಾಕರ್​ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ (BJP) ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸ್ವಾಗತ ವಿಚಾರವಾಗಿ ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘನೆ ಆರೋಪ ಮಾಡಲಾಗಿದೆ. ಕಳೆದ ಬಾರಿ 5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಚಿತ್ರದುರ್ಗದಲ್ಲಿ 70 ಸಾವಿರ ಲೀಡ್ ಕೊಟ್ಟರೆ 25 ಕೋಟಿ ರೂ. ಅನುದಾನ ಕೊಡಿಸ್ತೀನಿ ಎಂದಿದ್ದ ಸಚಿವ ಡಿ.ಸುಧಾಕರ್​​ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್​ಐಆರ್​ ದಾಖಲು

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ದಾಖಲೆ ಇಲ್ಲದ 2.93 ಕೋಟಿ ರೂ. ಪತ್ತೆ: ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ವೇಳೆ ‘ನುಡಿದಂತೆ ನಡೆದಿದ್ದೀವೆ, 5 ಗ್ಯಾರಂಟಿ ಕೊಟ್ಟಿದ್ದೇವೆ’ ಎಂಬ ಕರಪತ್ರ ಹಂಚಿಕೆ ಮಾಡಿದ್ದರು. ಈ ಹಿನ್ನೆಲೆ ಕಲಾಸಿಪಾಳ್ಯ ಠಾಣೆಗೆ ಚುನಾವಣಾ ಅಧಿಕಾರಿ ಸಂತೋಷ್ ದೂರು ನೀಡಿದ್ದರು. ಜನಪ್ರತಿನಿಧಿ ಕಾಯ್ದೆ 1950, 1951, 1989ರ ಅಡಿಯಲ್ಲಿ ಸೌಮ್ಯಾರೆಡ್ಡಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ಧ FIR ದಾಖಲಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇತ್ತೀಚೆಗೆ ನಿಯೋಜಿಸಲಾಗಿದ್ದ ಅಧಿಕಾರಿ ಡಿಸಿಎಂ ಡಿಕೆ ಶಿವಕುಮಾರ್​ಗೆ​ ಊಟ ಬಡಿಸಿದ್ದರು. ಆ ಚುನಾವಣಾಧಿಕಾರಿ ವಿರುದ್ಧ ಬಿಜೆಪಿ ದೂರು ನೀಡಿತ್ತು. ಜೊತೆಗೆ ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ನಿರ್ಮಿಸಿರೋ ‘ಭೈರತಿ ರಣಗಲ್’ ಜಾಹೀರಾತು ಮೊತ್ತವನ್ನ ಚುನಾವಣಾ ವೆಚ್ಚಕ್ಕೆ ಸೇರಿಸಬೇಕೆಂದು ಬಿಜೆಪಿ ದೂರಿತ್ತು.

ಇದನ್ನೂ ಓದಿ: ಜೀವನದ ಸುದೀರ್ಘ ಅನುಭವವನ್ನ ಪ್ರಧಾನಿ ಮೋದಿ ಮುಂದೆ ಹಂಚಿಕೊಂಡಿದ್ದೇನೆ: ಹೆಚ್​ಡಿ ದೇವೇಗೌಡ

ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಬಿಜೆಪಿ ಪ್ರಚಾರ ವಾಹನದಲ್ಲಿದ್ದ ಸಲಹಾ ಪೆಟ್ಟಿಗೆ ಸುಟ್ಟಿದ್ದಕ್ಕೆ ದೂರು ನೀಡಿತ್ತು. ಇನ್ನೂ ದಾವಣಗೆಯಲ್ಲಿ ಕಾಂಗ್ರೆಸ್ ಅಕ್ಕಿ ಹಂಚುತ್ತಿರುವ ಆರೋಪದ ಬಗ್ಗೆಯೂ ದೂರು ಸಲ್ಲಿಸಿದೆ. ಇದರ ಜೊತೆಗೆ ಪ್ರಚಾರಕ್ಕೆ ಮೋದಿ ಫೋಟೋ ಬಳಸಿದ ಕೆ.ಎಸ್​​.ಈಶ್ವರಪ್ಪ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ನೀಡಿತ್ತು.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.