ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಜಾರಕಿಹೊಳಿಗೆ ಬಿಎಲ್​​​​ ಸತೋಷ್ ದಿಢೀರ್ ಬುಲಾವ್

ಮೈಸೂರು ಪಾದಯಾತ್ರೆ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಭೆ ಮುಂದೂಡಲ್ಪಟ್ಟಿದೆ. ಸಭೆಯ ನೇತೃತ್ವ ವಹಿಸಿದ್ದ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ವಾರ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ನಿಂದ ಸೂಚನೆಯ ನಿರೀಕ್ಷೆಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡ ಇದೆ. 

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಜಾರಕಿಹೊಳಿಗೆ ಬಿಎಲ್​​​​ ಸತೋಷ್ ದಿಢೀರ್ ಬುಲಾವ್
ರಮೇಶ್ ಜಾರಕಿಹೊಳಿ, ಸಂತೋಷ್
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Aug 16, 2024 | 5:27 PM

ಬೆಂಗಳೂರು, (ಆಗಸ್ಟ್ 16): ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್​ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್​ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್​ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್​ನತ್ತ ನೆಟ್ಟಿದೆ.

ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಭೆಗಳಲ್ಲಿ ತೊಡಗಿರುವ ಬಿಜೆಪಿ ಮುಖಂಡರು, ಈಗ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದಾರೆ. ಹೀಗಾಗಿ ಆಗಸ್ಟ್ 21ರಂದು ಬೆಂಗಳೂರಿನಲ್ಲಿ ನಡೆಸುವುದಕ್ಕೆ ಪ್ಲ್ಯಾನ್ ಮಾಡಿದ್ದ 3ನೇ ಸಭೆ ಮುಂದೂಡಿಕೆಯಾಗಿದೆ. ಈ ಮಧ್ಯೆ ಸಭೆಯ ನೇತೃತ್ವ ವಹಿಸಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ವಾರ ನವದೆಹಲಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಮೈಸೂರು ಚಲೋಗೆ ಬಿಜೆಪಿ ರೆಬೆಲ್​ ನಾಯಕರ ಸೆಡ್ಡು. ಬಳ್ಳಾರಿ ಪಾದಯಾತ್ರೆಗೆ ಮುಹೂರ್ತ ಫಿಕ್ಸ್?

ಬಿಎಲ್​ ಸಂತೋಷ್​​ ಬುಲಾವ್

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್​​ರಿಂದ ಬುಲಾವ್ ಮೇರೆಗೆ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಆಪ್ತರ ಪ್ರಕಾರ ಆಗಸ್ಟ್ 19 ರಂದೇ ಹೈಕಮಾಂಡ್​ ನಾಯಕರನ್ನ ಭೇಟಿ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಶಾಸಕರಾದ ರಮೇಶ್ ಜಾರಕಿಹೊಳಿ‌, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಪ್ರಯಾಣ ಮಾಡೋ ಸಾಧತೆ ಇದೆ ಎನ್ನಲಾಗಿದ್ದು, ಮಾತುಕತೆ ನಡೆಸಿ ಪ್ರತ್ಯೇಕ ಪಾದಯಾತ್ರೆ ವಿವಾದ ಪರಿಹರಿಸುವ ಸಾಧ್ಯತೆಯೂ ಇದೆ. ಇನ್ನು ಆಗಸ್ಟ್ 21ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಭೆ ತಾತ್ಕಾಲಿಕ ಮುಂದೂಡಿಕೆಯಾಗಿದೆ.

ಈ ಮಧ್ಯೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪಾದಯಾತ್ರೆಯ ವಿಚಾರದಲ್ಲಿ ಮೂರು ರೀತಿಯ ಪ್ರಯತ್ನಗಳು ಬಿಜೆಪಿಯೊಳಗೆ ನಡೆಯುತ್ತಿದೆ. ನಮ್ಮ ನೇತೃತ್ವದಲ್ಲಿ ನಡೆಯಲಿ ಎಂದು ಶಾಸಕರಾದ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಆದ್ರೆ ಪಾದಯಾತ್ರೆ ನಡೆದ್ರೆ ಪಕ್ಷದ ವತಿಯಿಂದಲೇ ನಡೆಯುವಂತಾಗಬೇಕೆಂದು ಹೈಕಮಾಂಡ್ ನಾಯಕರನ್ನ ಒಪ್ಪಿಸುವ ಪ್ರಯತ್ನದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದ್ದಾರೆ. ಇದರ ನಡುವೆಯೇ ಬಿಎಸ್​ವೈ ಮತ್ತು ವಿಜಯೇಂದ್ರ ಅವರನ್ನು ಬಹಿರಂಗವಾಗಿ ವಿರೋಧಿಸದೇ, ಆಂತರಿಕವಾಗಿಯೇ ಮತ್ತೊಂದು ಪಾದಯಾತ್ರೆ ನಡೆಯಲಿ ಎಂಬ ಪ್ರಯತ್ನದಲ್ಲಿ ಒಂದು ಬಣ ಸಕ್ರೀಯವಾಗಿದೆ.‌

ಮತ್ತೊಂದೆಡೆ ಆಗಸ್ಟ್ 21 ರ ಸಭೆ ನಿಗದಿಯೇ ಆಗಿಲ್ಲ ಎನ್ನುವ ಮೂಲಕ ಬಿಜೆಪಿ ಸಮಾನ ಮನಸ್ಕ ಮುಖಂಡರು ತಮ್ಮ ಕಾರ್ಯತಂತ್ರ ಪೂರ್ಣ ಬಹಿರಂಗವಾಗದಂತೆಯೂ ಎಚ್ಚರಿಕೆ ವಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ