1991ರಲ್ಲಿಯೇ ಕಾಂಗ್ರೆಸ್ ಮತಕಳ್ಳತನ ಮಾಡಿತ್ತಾ? ತಿರುಗುಬಾಣವಾದ ಸಿದ್ದರಾಮಯ್ಯ ಹೇಳಿಕೆ
ಕಾಂಗ್ರೆಸ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಮಾಡಿ ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಸಹ 2024ರ ಲೋಕಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂಬ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇದೀಗ ತಾವು 1991ರ ಲೋಕಸಭಾ ಚುನಾವಣೆಯಲ್ಲಿ ವಂಚನೆಯಿಂದ ಸೋತಿದ್ದಾಗಿ ಹೇಳಿದ್ದು, ಇದು ಈಗ ಭಾರೀ ಕೋಲಾಹಲ ಎಬ್ಬಿಸಿದೆ. ಇದನ್ನೇ ಅಸ್ಟ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ನಿಜವಾದ ಮತ ಕಳ್ಳರು ಯಾರು ಎಂದು ಪ್ರಶ್ನಿಸಿದೆ.

ಬೆಂಗಳೂರು, (ಆಗಸ್ಟ್ 29): 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) ಕಾಂಗ್ರೆಸ್‌ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ತಮ್ಮನ್ನು ಮೋಸದಿಂದ ಸೋಲಿಸಿದ್ದಾಗಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದ್ರೆ, ಇದೀಗ ಸಿದ್ದರಾಮಯ್ಯನವರ ಈ ಹೇಳಿಕೆ ಕಾಂಗ್ರೆಸ್ ಹಾಗೂ ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ತಿರುಗುಬಾಣವಾಗಿದೆ. ಹೌದು.. 2024ರ ಲೋಕಸಭೆ ಚುನಾವಣೆ ವೇಲೆ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ (Rahul Gandhi) ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಂದು ಸಿದ್ದರಾಮಯ್ಯನವರನ್ನ ಕಾಂಗ್ರೆಸ್ ಮೋಸದಿಂದ ಸೋಲಿಸಿತ್ತೇ. ಹಾಗಾದ್ರೆ, ಕಾಂಗ್ರೆಸ್ ಅಂದು ಮತಗಳ್ಳತನ (Vote Chori) ಮಾಡಿತ್ತಾ ಎನ್ನುವ ಪ್ರಶ್ನೆ, ಚರ್ಚೆಗಳು ಜೋರಾಗಿವೆ. ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಅಂದು ಜೆಡಿಎಸ್ ನಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ ಮೋಸದಿಂದ ಸೋಲಿಸಿದೆ ಅಲ್ಲವೇ? ಎಂದು ಸಿದ್ದರಾಮಯ್ಯನವರಿಗೆ ಪ್ರಶ್ನಿಸಿದೆ.
ಸಿದ್ದರಾಮಯ್ಯ ಹೇಳಿದ್ದೇನು?
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನ ಆರೋಪ ರಾಷ್ಟ್ರರಾಜಕಾರಣದಲ್ಲಿ ಭಾರೀ ಸಂಚಲಕ್ಕೆ ಕಾರಣವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರೀ ಮತಗಳ್ಳತನವಾಗಿದ್ದರಿಂದ ಕಾಂಗ್ರೆಸ್ ಗೆ ಸೋಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂದ ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ರೆ, ಇತ್ತ ಸಿದ್ದರಾಮಯ್ಯ ಅವರು 1991ರಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಇದೇ ಮತಗಳ್ಳತನದಿಂದ ಸೋಲಿಸಿದ್ರು ಎಂದು ಹೇಳಿಕೆ ನೀಡಿದ್ದಾರೆ.
ವಕೀಲರ ಸಂಘದಿಂದ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಿದ್ದರಾಮಯ್ಯ, ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನೆರವು ನೀಡಿದ್ದರು ಎಂದು ಸ್ಮರಿಸಿಕೊಂಡರು. ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಸಿದ್ದರಾಮಯ್ಯನವರೇ 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅನ್ವರಿ ಅವರು ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ ಎಂದು ಕಾಲೆಳೆದಿದೆ.
ಸಾಕ್ಷಿ ಸಮೇತ ಟಾಂಗ್ ಕೊಟ್ಟ ಅಮಿತ್ ಮಾಳವಿಯಾ
ಈ ಬಗ್ಗೆ ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವಿಯಾ ಸಹ ಟ್ವೀಟ್ ಮಾಡಿದ್ದು, 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ “ಚುನಾವಣಾ ವಂಚನೆ”ಗೆ ಬಲಿಯಾಗಿದ್ದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಮೋಸದಿಂದ ಸೋಲಿಸಿದರು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ವೀಡಿಯೊ ಇದಕ್ಕೆ ಸಾಕ್ಷಿ. ಮತಗಳ್ಳತನ ವಿರುದ್ಧ ಹೋರಾಡಿದ ಕಾಂಗ್ರೆಸ್ಸಿನ ಅದೇ ವ್ಯಕ್ತಿ ಇಂದು ಅವರ ಮುಖ್ಯಮಂತ್ರಿಯಾಗಿದ್ದು, ಮತ ಅಧಿಕಾರ್ ರ್ಯಾಲಿಯ ನೇತೃತ್ವ ವಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಟಾಂಗ್ ಕೊಟ್ಟರು.
ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ
Watch: Karnataka CM Siddaramaiah himself admits he was a victim of “electoral fraud” by the Congress party in the 1991 Koppal Lok Sabha polls. He clearly says he was defeated “ಮೋಸದಿಂದ / Mōsadinda” (by cheating).
ಸಿಎಂ @siddaramaiah ಅವರೆ, 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅನ್ವರಿ ಅವರು ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ.
ಈಗ ಅದ್ಯಾವ ಮುಖ ಇಟ್ಟುಕೊಂಡು ಬಿಹಾರದಲ್ಲಿ #LoserRahul ಗಾಂಧಿ… pic.twitter.com/1kZtXcErTD
— BJP Karnataka (@BJP4Karnataka) August 29, 2025
This video is proof—the same man who once fought against Congress’s… https://t.co/Y2cNGS8hPT pic.twitter.com/0Hlkwlm59N
— Amit Malviya (@amitmalviya) August 29, 2025
1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅನ್ವರಿ ಅವರು ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ. ಈಗ ಅದ್ಯಾವ ಮುಖ ಇಟ್ಟುಕೊಂಡು ಬಿಹಾರದಲ್ಲಿ #LoserRahul ಗಾಂಧಿ ನಡೆಸುತ್ತಿರುವ #VoteAdhikarYatra ದಲ್ಲಿ ಭಾಗಿಯಾಗುತ್ತೀರಿ ಎಂಬುದನ್ನು ತಿಳಿಸುವಿರಾ ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯನವರನ್ನು ಮೋಸದಿಂದ ಸೋಲಿಸಿದ್ದು ಯಾರು?
ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನು ಸಿಎಂ ಸಿದ್ದರಾಮಯ್ಯ ಅವರು ಬಯಲು ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟಕ್ಕರ್ ನೀಡಿದ್ದಾರೆ. ಮತಕಳ್ಳತನ ಆರೋಪದ ಕುರಿತಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಅಶೋಕ್, ಸಿದ್ದರಾಮಯ್ಯ ಅವರು 1991 ರಲ್ಲಿ ಸ್ಪರ್ಧಿಸಿದ್ದ ಲೋಕಸಭೆ ಚುನಾವಣೆಯ ಸೋಲಿನ ಬಗ್ಗೆ ಉಲ್ಲೇಖಿಸಿದ್ದು, 1991ರಲ್ಲಿ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದರು. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳ ಪಕ್ಷದಿಂದ ಸ್ಪರ್ಧಿಸಿದ್ದರು. ಈ ವೇಳೆ ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು ಯಾರು? ಅದು ಕಾಂಗ್ರೆಸ್ ಪಕ್ಷವಲ್ಲವೇ ಎಂದು ಟಾಂಕ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯನ ವಜಾ ಮಾಡುವ ಧೈರ್ಯ ಇದೆಯಾ?
“ಮತಗಳ್ಳತನ”ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಅವರು ಆರೋಪ ಮಾಡಿದ್ದರು. ಆದರೆ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಲಾಗಿತ್ತು. ರಾಹುಲ್ ಗಾಂಧಿ ಸೂಚನೆಯಂತೆ ವಜಾ ಮಾಡಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಅಥವಾ ಕಾಂಗ್ರೆಸ್ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ? ಎಂದು ಪ್ರಶ್ನಿಸಿದ್ದಾರೆ.
Published On - 5:16 pm, Fri, 29 August 25




