AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. 4ರ ಬಳಿಕ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ: ಹೈಕಮಾಂಡ್ ಭರವಸೆ ನೀಡಿದೆ ಎಂದ ಯತ್ನಾಳ್

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗುತ್ತೆ. ನನಗೆ ಹೈಕಮಾಂಡ್ ಭರವಸೆ ನೀಡಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್​ನಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಅಭ್ಯರ್ಥಿ. ನಮ್ಮ ಪಕ್ಷದಲ್ಲೂ ಅದೇ ರೀತಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಜೂ. 4ರ ಬಳಿಕ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ: ಹೈಕಮಾಂಡ್ ಭರವಸೆ ನೀಡಿದೆ ಎಂದ ಯತ್ನಾಳ್
ಬಿಜೆಪಿ ಶಾಸಕ ಯತ್ನಾಳ್​
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Apr 04, 2024 | 6:08 PM

Share

ಉತ್ತರ ಕನ್ನಡ, ಏಪ್ರಿಲ್​ 04: ನನಗೆ ವಿಪಕ್ಷ ನಾಯಕನಾಗುವ ಅರ್ಹತೆ ಇದ್ದರೂ ಸಹ ಮಾಡಲಿಲ್ಲ. ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗುತ್ತೆ. ನನಗೆ ಹೈಕಮಾಂಡ್ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಅವರು, ಯಾರ್ಯಾರು ಅಸಮಾಧಾನಿತರು ಇದ್ದಾರೋ ಅವರಿಗೆ ವಿನಂತಿ ಮಾಡುವೆ. ವೈಯಕ್ತಿಕ ವಿಚಾರ ಬಿಟ್ಟು, ನರೇಂದ್ರ ಮೋದಿಗಾಗಿ ನಾವೆಲ್ಲರೂ ಕೂಡಿ ಕೆಲಸ ಮಾಡೋಣ. ಹಿಂದುತ್ವದ ರಾಜಕಾರಣಿಗಳನ್ನು ಯಾವತ್ತೂ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈಶ್ವರಪ್ಪ ಹೇಳುವ ವಿಚಾರ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇ

ಹೈಕಮಾಂಡ್ K.S.ಈಶ್ವರಪ್ಪ ಹೇಳುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲಾ ಸಮಸ್ಯೆ ಬಗೆಹರಿಸಬೇಕು. ನಾನು ಹೈಕಮಾಂಡ್​ಗೆ ವಿನಂತಿ ಮಾಡಿಕೊಳ್ಳುತ್ತೇನೆ. ಲೋಕಸಭೆಲ್ಲಿ 28 ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮೆಲ್ಲರ ಗುರಿ ಎಂದಿದ್ದಾರೆ.

ಬೊಮ್ಮಾಯಿ ಬದಲು ನನ್ನ ಸಿಎಂ ಮಾಡಿದ್ದರೆ 103 ಸ್ಥಾನ ಗೆಲ್ಲಿಸುತ್ತಿದ್ದೆ

ಡಾ.ಕೆ.ಸುಧಾಕರ್ ಸಚಿವರಾಗಿದ್ದಾಗ ಶಾಸಕರಿಗೆ ಸ್ಪಂದಿಸುತ್ತಿರಲಿಲ್ಲ ಎಂಬ ವಿಚಾರವಾಗಿ ಮಾತನಾಡಿದ ಅವರು, ಕೆ.ಸುಧಾಕರ್​ ನಡೆಯಿಂದ ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿತ್ತು. ಡಾ.ಸುಧಾಕರ್​ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ. ಕಾಂಗ್ರೆಸ್​ನಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಅಭ್ಯರ್ಥಿ. ನಮ್ಮ ಪಕ್ಷದಲ್ಲೂ ಅದೇ ರೀತಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ದೊಡ್ಡ ಬದಲಾವಣೆ: ಅಪ್ಪ ಮಕ್ಕಳ ವಿರುದ್ಧ ಯತ್ನಾಳ್ ಮತ್ತೆ​ ವಾಗ್ದಾಳಿ

ಈ ಚುನಾವಣೆ ಅಪ್ಪ, ಮಕ್ಕಳು, ಅಳಿಯ, ಮಗಳು ಅಂತಲೇ ಆಗಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಚಿವರು ಒಬ್ಬರೂ ನಿಲ್ಲಲಿಲ್ಲ. ಸೋತರೆ ಮಂತ್ರಿ ಸ್ಥಾನ ಹೋಗುತ್ತೆ ಅಂತಾ ಯಾರೂ ಸ್ಪರ್ಧಿಸಿಲ್ಲ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬದಲು ನನ್ನ ಸಿಎಂ ಮಾಡಿದ್ದರೆ 103 ಸ್ಥಾನ ಗೆಲ್ಲಿಸುತ್ತಿದ್ದೆ. ಹಿಂದೂ ಕಾರ್ಯಕರ್ತರು ನಿರಾಸಕ್ತಿ ತೋರಿಸಿದ್ದಕ್ಕೆ ಸೋತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಹೇಳುತ್ತಿರುವುದೆಲ್ಲ ಶತ ಪ್ರತಿಶತ ಸತ್ಯ, ಅಪ್ಪ ಮಕ್ಕಳಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ: ಬಸನಗೌಡ ಪಾಟೀಲ್ ಯತ್ನಾಳ್

ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ಗಲಾಟೆ ಆದಾಗ, ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಆದಾಗ, ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತರ ಹತ್ಯೆಯಾದಾಗ ನಾಲ್ಕು ಎನ್​​ಕೌಂಟರ್ ಮಾಡಿದ್ದರೇ ಈ ಪರಿಸ್ಥಿತಿ ಇರುತ್ತಿರಲಿಲ್ಲ. ಹಿಂದೂ ಕಾರ್ಯಕರ್ತರು ನಿರಾಸಕ್ತಿ ತೋರಿಸಿದ್ದಕ್ಕೆ ನಾವು ಸೋತೆವು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.