ಬಿಜೆಪಿಯಿಂದ ನೋಟಿಸ್ ಜಾರಿ: ಪಕ್ಷದಿಂದ ಉಚ್ಛಾಟನೆಯಾಗ್ತಾರಾ ರಘುಪತಿ ಭಟ್?

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಈ ಬಾರಿ ಮಾಜಿ ಶಾಸಕ ರಘುಪತಿ ಭಟ್​ಗೆ ಟಿಕೆಟ್​ ಕೈತಪ್ಪಿದೆ. ಹೀಗಾಗಿ ಇತ್ತೀಚೆಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯ ಬಿಜೆಪಿ ಶಿಸ್ತು ಸಮಿಯಿಂದ ನೋಟಿಸ್​ ನೀಡಲಾಗಿದೆ.

ಬಿಜೆಪಿಯಿಂದ ನೋಟಿಸ್ ಜಾರಿ: ಪಕ್ಷದಿಂದ ಉಚ್ಛಾಟನೆಯಾಗ್ತಾರಾ ರಘುಪತಿ ಭಟ್?
ಬಿಜೆಪಿಯಿಂದ ನೋಟಿಸ್ ಜಾರಿ, ಪಕ್ಷದಿಂದ ಉಚ್ಛಾಟನೆಯಾಗ್ತಾರಾ ರಘುಪತಿ ಭಟ್?
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:May 23, 2024 | 3:52 PM

ಬೆಂಗಳೂರು, ಮೇ 23: ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಜೂ.3ಕ್ಕೆ ಚುನಾವಣೆ ನಿಗದಿಯಾಗಿದೆ. ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್​ ಕೈತಪ್ಪಿದಕ್ಕೆ ಬಿಜೆಪಿ (BJP) ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಹಿನ್ನೆಲೆ ಮಾಜಿ ಶಾಸಕ ರಘುಪತಿ ಭಟ್​ಗೆ (K. Raghupati Bhat) ಬಿಜೆಪಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. 2 ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ರಘುಪತಿ ಭಟ್​ಗೆ ನೋಟಿಸ್​ ನೀಡಲಾಗಿದೆ.

ಬಿಜೆಪಿ ನೋಟಿಸ್​ನಲ್ಲೇನಿದೆ?

ಜೂ. 3 ಸೋಮವಾರದಂದು ನಡೆಯುವ ವಿಧಾನಪರಿಷತ್​ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಆದುದರಿಂದ ಈ ಪತ್ರ ತಲಪಿದ ಎರಡು ದಿನದ ಒಳಗಾಗಿ ಬಿಜಿಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲೂ ಬಿಜೆಪಿಯಲ್ಲಿ ಬಂಡಾಯ: ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್

ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಈ‌ ಕ್ಷೇತ್ರದಿಂದ ಶಿವಮೊಗ್ಗದ ಡಾ.ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿದೆ. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕರಾವಳಿ ಬಿಜೆಪಿಯಲ್ಲಿ ಬಂಡಾಯ ಸ್ಫೋಟ, ತೊಡೆತಟ್ಟಿದ ಉಡುಪಿ, ಮಂಗಳೂರು ನಾಯಕರು

ಈ ಕುರಿತಾಗಿ ಅವರು ಫೇಸ್‌ ಬುಕ್​ನಲ್ಲಿ ಬರೆದುಕೊಂಡಿದ್ದರು. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:51 pm, Thu, 23 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ