BJP Janaspandana: ಇಂದು ನಡೆಯುವ ಜನಸ್ಪಂದನ ಸಮಾವೇಶಕ್ಕೆ ನೂರಾರು ಬಸ್​ಗಳ ಬುಕ್ಕಿಂಗ್, ಗಣ್ಯಾತಿ ಗಣ್ಯರು ಸಮಾವೇಶದಲ್ಲಿ ಭಾಗಿ

BJP Janaspandana: ಕರ್ನಾಟಕ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುವ ಉದ್ದೇಶದಿಂದ ಬಿಜೆಪಿ ಆಯೋಜಿಸಿದ ಜನಸ್ಪಂದನ ಕಾರ್ಯಕ್ರಮ ಇಂದು ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ.

BJP Janaspandana: ಇಂದು ನಡೆಯುವ ಜನಸ್ಪಂದನ ಸಮಾವೇಶಕ್ಕೆ ನೂರಾರು ಬಸ್​ಗಳ ಬುಕ್ಕಿಂಗ್, ಗಣ್ಯಾತಿ ಗಣ್ಯರು ಸಮಾವೇಶದಲ್ಲಿ ಭಾಗಿ
ಬಿಜೆಪಿ ಜನಸ್ಪಂದನ ಸಮಾವೇಶ
Follow us
TV9 Web
| Updated By: Rakesh Nayak Manchi

Updated on:Sep 10, 2022 | 8:13 AM

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುವ ಉದ್ದೇಶದಿಂದ ಆಡಳಿತ ಪಕ್ಷ ಬಿಜೆಪಿ ಇಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬದಲಾಗಿ ಜನಸ್ಪಂದನ ಸಮಾವೇಶ (Janaspandana Samavesha) ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು, ಫಲಾನುಭವಿಗಳನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ. ಇದರ ಭಾಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೆ 50 ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಅಷ್ಟೇ ಅಲ್ಲದೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾಗಿರುವ ಕಾರಣ ಈ ಕಾರ್ಯಕ್ರಮವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೇ 50ಸಾವಿರ ಜನರನ್ನು ಗುರಿಯಾಗಿಸಿಕೊಂಡಿರುವ ಬಿಜೆಪಿ, ಸಮಾವೇಶಕ್ಕೆ ಜನರನ್ನು ಕರೆ ತರಲು ಟಾರ್ಗೆಟ್ ನಿಗದಿ ಮಾಡಿಕೊಂಡಿದೆ. ಸ್ಥಳಿಯ ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಮುಖಂಡರುಗಳಿಗೆ ಜನರನ್ನು ಕರೆತರುವ ಕಾರ್ಯವನ್ನು ನೀಡಿದೆ. ಸಚಿವರಿಂದ ಈ ಟಾರ್ಗೆಟ್ ನಿಗದಿಯಾಗಿದ್ದು, ಪ್ರತಿಯೊಂದು ಹಳ್ಳಿ ಹಳ್ಳಿಗಳಿಂದ ಜನರನ್ನು ಕರೆ ತರುವಂತೆ ಸೂಚಿಸಲಾಗಿದೆ. ಅದರಂತೆ ಆಯಾ ಹಳ್ಳಿಗಳಿಗೆ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್​ಗಳ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೇ 50ಸಾವಿರ ಜನರನ್ನು ಸಮಾವೇಶಕ್ಕೆ ಕರೆತರುವ ಪ್ಲಾನ್ ಹಾಕಿಕೊಳ್ಳಲಾಗಿದ್ದು, 876 ಬಸ್​ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶ ನಡೆಯುವ ಹಿನ್ನೆಲೆ ಸಮಾವೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಓರ್ವ ಡಿವೈಎಸ್​​ಪಿ, ನಾಲ್ವರು ಇನ್ಸ್​ಪೆಕ್ಟರ್​, 13 ಪಿಎಸ್​ಐ, 23 ಎಎಸ್​ಐ ಹಾಗೂ 150 ಪೊಲೀಸ್​ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಯಾರೆಲ್ಲ ಸಮಾವೇಶಕ್ಕೆ ಭಾಗಿಯಾಗಲಿದ್ದಾರೆ?

ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇನ್ನಿತರರ ಸಚಿವರುಗಳು ಭಾಗವಹಿಸಲಿದ್ದಾರೆ.

ಆರು ಸಚಿವರು ಸಮಾವೇಶಕ್ಕೆ ಗೈರು

ಇಂದು ಜನಸ್ಪಂದನ ಸಮಾವೇಶಕ್ಕೆ ಸಚಿವರುಗಳಾದ ವಿ. ಸೋಮಣ್ಣ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಹಾಲಪ್ಪ ಆಚಾರ್ ಮತ್ತು ಶಂಕರ ಪಾಟೀಲ್ ಮುನೇನಕೊಪ್ಪ ಗೈರು ಅವರು ಗೈರಾಗಲಿದ್ದಾರೆ. ಸೋಮಣ್ಣ ಅವರು ಚಾಮರಾಜನಗರ ಜಿಲ್ಲಾ ಪ್ರಚಾರದಲ್ಲಿದ್ದು, ನಿರಾಣಿ ಅಮೆರಿಕಾ ಜಿಮ್ ರೋಡ್ ಶೋ ಕಾರ್ಯಕ್ರಮದಲ್ಲಿ, ಸುನಿಲ್ ಕುಮಾರ್ ಮಂಗಳೂರಿನಲ್ಲಿ ನಡೆಯುವ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಹೈದರಾಬಾದ್​ನಲ್ಲಿ ರಾಷ್ಟ್ರೀಯ ಗಣಿ ಸಚಿವರ ಸಮ್ಮೇಳನಲ್ಲಿ ಇರುವ ಹಿನ್ನೆಲೆ ಗೈರಾಗಲಿದ್ದಾರೆ. ಇನನ್ನು ಹಾಲಪ್ಪ ಆಚಾರ್ ಅವರು ಪೂರ್ವ ನಿಗದಿತ ಕಾರ್ಯಕ್ರಮದ ಕಾರಣ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ.

ರಾರಾಜಿಸುತ್ತಿದೆ ಬಿಜೆಪಿ ಧ್ವಜ, ಘಟಾನುಘಟಿಗಳ ಬ್ಯಾನರ್

ಸಮಾವೇಶದ ಹಿನ್ನಲೆ ದಾರಿಯುದ್ದಕ್ಕೂ ಬಿಜೆಪಿ ಭಾವುಟ ಹಾಗೂ ಘಟಾನುಘಟಿ ನಾಯಕರ ಬ್ಯಾನರ್​ಗಳು ರಾರಾಜಿಸುತ್ತಿವೆ. ಯಲಹಂಕದಿಂದ ದೊಡ್ಡಬಳ್ಳಾಪುರದವರೆಗೂ ಬ್ಯಾನರ್​ಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಜೆಪಿ ನಡ್ಡಾ, ಡಾ.ಕೆ ಸುಧಾಕರ್, ಎಸ್.ಆರ್ ವಿಶ್ವನಾಥ್, ನಳೀನ್ ಕುಮಾರ್ ಕಟೀಲ್, ಎಂಟಿಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ನಾಯಕರ ಫೋಟೋವುಳ್ಳ ಬ್ಯಾನರ್​ಗಳನ್ನು ಹಾಕಲಾಗಿದೆ. ಆದರೆ ಈ ಹಿಂದೆ ಜನೋತ್ಸವಕ್ಕೆಂದೇ ಸಿದ್ಧಪಡಿಸಿದ್ದ ಬ್ಯಾನರ್​ಗಳನ್ನೇ ಹಾಕಲಾಗಿದೆ.

ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ಪಕ್ಷ ತೊರೆದ ಮಾಜಿ ಎಂಎಲ್​ಸಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಸಮಾವೇಶದ ಸಂದರ್ಭದಲ್ಲಿ ಗಣ್ಯರ ಸಮ್ಮುಖದಲ್ಲಿಯೇ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್ ಕುಮಾರ್ ಅವರು ಕೂಡ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇವರು ಇತ್ತೀಚೆಗಷ್ಟೇ ಸೇವೆಯಿಂದ ನಿವೃತ್ತಿ ಹೊಂದಿದ್ದರು.

ಯಾರೆಲ್ಲ ಭಾಷಣ ಮಾಡಲಿದ್ದಾರೆ?

ಜನಸ್ಪಂದನ ಸಮಾವೇಶದಲ್ಲಿ ಬೆಳಗ್ಗೆ 11.30ಕ್ಕೆ ಬಿಜೆಪಿ ನಾಯಕರು ಮತ್ತು ಸಚಿವರ ಭಾಷಣ ಆರಂಭಗೊಳ್ಳಲಿದೆ. ಮಧ್ಯಾಹ್ನ 12.50ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಭಾಷಣ ಆರಂಭಗೊಳ್ಳಲಿದ್ದು, ನಂತರ ಮಾಜಿ ಸಿಎಂ ಯಡಿಯೂರಪ್ಪ, ಅನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡಲಿದ್ದಾರೆ. ಸಮಾವೇಶದ ಕೊನೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಭಾಷಣ ನಿಗದಿಯಾಗಿದೆ.

Published On - 8:12 am, Sat, 10 September 22

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ