AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಬಿಜೆಪಿ ಜೊತೆಗಿನ ಮೈತ್ರಿ ಮರುಪರಿಶೀಲನೆ ಮಾಡಿ: ದೇವೇಗೌಡ್ರಿಗೆ ಇಬ್ರಾಹಿಂ ಕಳಕಳಿಯ ಮನವಿ

ನೂರಕ್ಕೆ ನೂರರಷ್ಟು ನಾನು ಟೆಕ್ನಿಕಲಿ, ಮೆಂಟಲಿ ಜೆಡಿಎಸ್​ನಲ್ಲಿ ಇದ್ದೀನೆ. ನಾನೇ ಅದರ ಅಧ್ಯಕ್ಷ ಅಂತ ಹೇಳಿದ್ದೀನಿ. ವಿಸರ್ಜನೆ ಮಾಡೋಕೆ ಬರಲ್ಲ. ಹೆಚ್​ ಡಿ ದೇವೇಗೌಡರು ತಪ್ಪು ಮಾಡಿದ್ದಾರೆ ಎಂದು ನೋವು ಆಗಿಲ್ಲ. ಇದನ್ನ ಸರಿಪಡಿಸಿಕೊಂಡು ಹೋಗೋಣ. ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಹೋಗೋಣ ಎಂದು ಸಿಎಂ ಇಬ್ರಾಹಿಂ ಹೇಳಿದರು.

ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಬಿಜೆಪಿ ಜೊತೆಗಿನ ಮೈತ್ರಿ ಮರುಪರಿಶೀಲನೆ ಮಾಡಿ: ದೇವೇಗೌಡ್ರಿಗೆ ಇಬ್ರಾಹಿಂ ಕಳಕಳಿಯ ಮನವಿ
ಹೆಚ್​ಡಿ ದೇವೇಗೌಡ, ಸಿಎಂ ಇಬ್ರಾಹಿಂ
Sunil MH
| Edited By: |

Updated on:Oct 22, 2023 | 1:28 PM

Share

ಬೆಂಗಳೂರು ಅ.22: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ (HD Devegowda) ಇನ್ನೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಬಿಜೆಪಿ (BJP) ಜೊತೆಗಿನ ಮೈತ್ರಿ ವಿಚಾರವನ್ನು ಮರುಪರಿಶೀಲನೆ ಮಾಡಿ. ಏಕೆಂದರೆ ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾ ಅವರಿಗೆ ಗೌರವ ಕೋಡೋಣ. ವ್ಯಕ್ತಿಗತವಾಗಿ ಯಾವುದೇ ಭಿನ್ನಮತವಿಲ್ಲ, ಸೈದ್ಧಾಂತಿಕವಾಗಿ ವಿರೋಧವಿದೆ ಎಂದು ಮಾಜಿ ಎಂಎಲ್​​ಸಿ ಸಿ.ಎಂ.ಇಬ್ರಾಹಿಂ (CM Ibrahim) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಕೇರಳ, ತಮಿಳುನಾಡು, ರಾಜಸ್ಥಾನ ಬಳಿಕ ಕಾರ್ಯಕ್ರಮದ ನಿಮಿತ್ತ ಉದಯಪುರಕ್ಕೆ ಹೋಗುತ್ತಿದ್ದೇನೆ. ಅಕ್ಟೋಬರ್​ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡುತ್ತೇನೆ. ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದರು.

ನೀವು ಟೆಕ್ನಿಕಲಿ, ಮೆಂಟಲಿ ಜೆಡಿಎಸ್​ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನೂರಕ್ಕೆ ನೂರರಷ್ಟು ನಾನು ಟೆಕ್ನಿಕಲಿ, ಮೆಂಟಲಿ ಜೆಡಿಎಸ್​ನಲ್ಲಿ ಇದ್ದೀನೆ. ನಾನೇ ಅದರ ಅಧ್ಯಕ್ಷ ಅಂತ ಹೇಳಿದ್ದೀನಿ. ವಿಸರ್ಜನೆ ಮಾಡೋಕೆ ಬರಲ್ಲ. ಹೆಚ್​ ಡಿ ದೇವೇಗೌಡರು ತಪ್ಪು ಮಾಡಿದ್ದಾರೆ ಎಂದು ನೋವು ಆಗಿಲ್ಲ. ಇದನ್ನ ಸರಿಪಡಿಸಿಕೊಂಡು ಹೋಗೋಣ. ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಹೋಗೋಣ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಸರ್ಜನೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ವಿಸರ್ಜನೆ ಮಾಡೋಕೆ ಬರಲ್ಲ ಆಗೋದೆ ಇಲ್ಲ. ಇದು ಕೋಳಿ ಮೊಟ್ಟೆನಾ ಒಡೆದು ಆಮ್ಲೆಟ್ ಮಾಡಲು. ಒಂದು ಚುನಾವಣೆ ಮೂಲಕ ಆಯ್ಕೆ ಆಗಿರುವ ಬಾಡಿ. ಚುನಾವಣೆ ಆಯೋಗದಲ್ಲಿ ನೋಂದಣಿ ಮಾಡಿರುವ ಪಾರ್ಟಿ. ರೋಲ್ಸ್ ಪ್ರಕಾರ ಪಾರ್ಟಿ ನಡೆಸಬೇಕು. ನನ್ನ ಇಚ್ಛೆ ಪ್ರಕಾರ ಪಾರ್ಟಿ ನಡೆಸಲು ಆಗಲ್ಲ. ಕೋರ್ ಕಮಿಟಿ ಮಾಡಿದ್ದು ನಾನು, ಪದಾಧಿಕಾರಿಗಳು ಮಾಡಿದ್ದು ನಾನು. ಕೋರ್ ಕಮಿಟಿ ಹೆಚ್​ಡಿ ದೇವೇಗೌಡ ಮಾಡಿದ್ದು ಅಲ್ಲ. ರಾಜ್ಯದಲ್ಲಿ ಜೆಡಿಎಸ್ ಅಧ್ಯಕ್ಷರಿಗೆ ಅಧಿಕಾರ ಇರುತ್ತೆ. ರಾಜ್ಯಾಧ್ಯಕ್ಷರು‌ ಸಂವಿಧಾನ ವಿರೋಧವಾಗಿ ಹೋದರೇ, 2/3 ಬಹುಮತ ಸದಸ್ಯರಿಂದ ನೋಟಿಸ್ ಕೊಡಬೇಕು. ಮೀಟಿಂಗ್ ಕರೆದು ಆ ಸಭೆಯಲ್ಲಿ ರಾಜ್ಯಾಧ್ಯಕ್ಷರನ್ನು ತೆಗೆಯಬೇಕಾಗುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ: CM Ibrahim: ರಾಜ್ಯದ ರಾಜಕಾರಣ ಗಂಭೀರ ಸ್ಥಿತಿಯಲ್ಲಿ ಸಾಗುತ್ತಿರುವಾಗ ಅದಕ್ಕೊಂದು ಮನರಂಜನೆಯ ತಿರುವು ನೀಡಿದ್ದು ಸಿ.ಎಂ .ಇಬ್ರಾಹಿಂ..!

ವಿಜಯದಶಮಿ ಮುಗಿದ ಮೇಲೆ ದಳಪತಿಗಳ ವಿರುದ್ಧ ಕಾನೂನು ಸಮರ

ಜೆಡಿಎಸ್ ಪಕ್ಷದ ವರಿಷ್ಠರ ವಿರುದ್ಧ​ ನ್ಯಾಯಾಲಯದ ಮೊರೆ ಹೋಗುತ್ತೀರಾ ಪ್ರಶ್ನೆಗೆ ಉತ್ತರಿಸಿದ ಅವರು ಅಕ್ಟೋಬರ್ 26ರ ಬಳಿಕ ನೋಡೋಣ. ಅಲ್ಲಿಯವರೆಗು ವರಿಷ್ಠರು ಏನಾದರೂ ತೀರ್ಮಾನ ಮಾಡುತ್ತಾರಾ ನೋಡೋಣ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೇಲೆ ನನಗೆ ವಿಶ್ವಾಸವಿದೆ. ಹೆಚ್​​ಡಿ ಕುಮಾರಸ್ವಾಮಿ ತೀರ್ಮಾನ ಮಾಡಬೇಕು, ಅವರ ಮೇಲೆ ನನಗೆ ಭರವಸೆ ಇಲ್ಲ. ವಿಜಯದಶಮಿ ಮುಗಿಯಲಿ ನೋಡೋಣ ಎಂದು ಹೇಳಿದರು.

ಬಿಜೆಪಿ ಜೊತೆಗಿನ ಮೈತ್ರಿಗೆ ಇಬ್ರಾಹಿ ಅಸಮಾಧಾನ

ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಂಡಿದೆ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮತ್ತು ನಟ ನಿಖಿಲ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಭೇಟಿಯಾಗಿ ಮೈತ್ರಿ ಮಾಡಿಕೊಂಡಿದ್ದರು. ಈ ಮೈತ್ರಿ ವಿಚಾರವನ್ನು ಆಗ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಅವರನ್ನು ಕೇಳದೆ ಮಾಡಿಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬಂದವು.

ಅಲ್ಲದೆ ಈ ಮೈತ್ರಿಯಿಂದ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು, ಜೆಡಿಎಸ್​ ಕಾರ್ಯಕರ್ತರ ಮತ್ತು ತಮ್ಮ ಆಪ್ತ ಜೊತೆ ಸಭೆ ನಡೆಸಿದ್ದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು ನಮ್ಮದೆ ಓರಿಜಿನಲ್​ ಪಕ್ಷ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯನ್ನ ಪಕ್ಷದಿಂದ ಉಚ್ಚಾಟನೆ ಮಾಡುವ ಮಾತುಗಳನ್ನು ಆಡಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಜೆಡಿಎಸ್​ನ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಸಿಎಂ ಇಬ್ರಾಹಿಂ ಅವರನ್ನು ಅಧಕ್ಷ ಸ್ಥಾನದಿಂದ ವಿಸರ್ಜಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:26 pm, Sun, 22 October 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ