AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್
ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on: Sep 09, 2023 | 9:35 AM

Share

ಬೆಂಗಳೂರು, ಸೆ.9: ಲೋಕಸಭೆ ಚುನಾವಣೆಗೆ (Loka Sabha Elections) ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಆದರೆ, ಜೆಡಿಎಸ್ ಕೇಳಿದಷ್ಟು ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ರಾಜ್ಯ ನಾಯಕರು ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ಕನಿಷ್ಠ 2 ಹಾಗೂ ಗರಿಷ್ಠ 3 ಸೀಟುಗಳನ್ನು ಮಾತ್ರ ಬಿಟ್ಟು ಕೊಡಲು ಒಲವು ಹೊಂದಿದ್ದಾರೆ. ಆದರೆ, ಮೈತ್ರಿ ಯಶಸ್ವಿಯಾಗಬೇಕಾದರೆ ಸೀಟುಗಳ ಹಂಚಿಕೆಯಲ್ಲಿ ತೃಪ್ತಿ ತರಬೇಕು. ಒಂದೊಮ್ಮೆ ಹೆಚ್ಚಿನ ಸ್ಥಾನಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟರೆ ಏನು ಮಾಡೋದು ಎಂಬ ಚಿಂತೆ ಬಿಜೆಪಿ ನಾಯಕರನ್ನು ಕಾಡಿದೆ.

ಹೆಚ್ಚಿನ ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹೇರುವ ಸಾಧ್ಯತೆ ಹಿನ್ನೆಲೆ ಬಿಜೆಪಿ ಮೆಗಾ ಪ್ಲಾನ್ ಹಾಕಿಕೊಂಡಿದೆ. ಜೆಡಿಎಸ್ ಕೇಳಿದಷ್ಟು ಐದಾರು ಕ್ಷೇತ್ರಗಳನ್ನು ನೇರವಾಗಿ ಬಿಟ್ಟುಕೊಡಲು ಸಿದ್ದವಿಲ್ಲದ ರಾಜ್ಯ ಬಿಜೆಪಿ ನಾಯಕರು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸುವ ಫಾರ್ಮುಲಾ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ, ಶಾ ರವಾನಿಸಿದ ಮಾಹಿತಿ ಬಿಚ್ಚಿಟ್ಟ ಯಡಿಯೂರಪ್ಪ

ಸದ್ಯ, ಮೂರು ಕ್ಷೇತ್ರಗಳನ್ನ ಕಮಲ ದಳ ನಾಯಕರು ಸರಿ ಮಾಡಿಕೊಂಡಿದ್ದಾರೆ. ಮಂಡ್ಯ ಲೋಕಾಸಭಾ ಕ್ಷೇತ್ರದ ಎರಡು ಕ್ಷೇತ್ರಗಳು ಮಾತ್ರ ಕಗ್ಗಾಂಟಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮಾತುಕತೆ ಆಗಿದ್ದು, ಇಲ್ಲಿ ಜೆಡಿಎಸ್ ಸ್ಪರ್ಧೆ ಖಚಿತವಾಗಿದೆ. ಇದರ ಜೊತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರದ ಬಗ್ಗೆ ಜೆಡಿಎಸ್ ಒಲವು ಹೊಂದಿದೆ.

ಆದರೆ, ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತಿಳಿಸಿಲ್ಲ. ಮಂಡ್ಯದಲ್ಲಿ ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ಘೋಷಣೆ ಮಾಡಿದ್ದಾರೆ. ಹಾಗಾಗಿ ಸುಮಲತಾಗೆ ಪರಿಯಾಯ ಕ್ಷೇತ್ರ ನೀಡಿದರೆ ಮಂಡ್ಯ ಜೆಡಿಎಸ್​ಗೆ ಸಿಗಬಹುದು.

ಆದರೆ, ತುಮಕೂರಿನಲ್ಲಿ ಬಿಜೆಪಿ ಸಂಸದ ಇದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಟ್ಟರೆ ಕ್ಷೇತ್ರ ಕಾಂಗ್ರೆಸ್ ಪಾಲು ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?