ಬಿಜೆಪಿ-ಜೆಡಿಎಸ್ ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಇರಲಿದೆ: ಹೆಚ್​ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಆದರೆ, ಈ ಮೈತ್ರಿಯು ತಾತ್ಕಾಲಿಕವಲ್ಲ ಎಂದು ಹೇಳಿರುವ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಅಸಾಧ್ಯ ಎಂದರು.

ಬಿಜೆಪಿ-ಜೆಡಿಎಸ್ ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಇರಲಿದೆ: ಹೆಚ್​ಡಿ ಕುಮಾರಸ್ವಾಮಿ
ಬಿಜೆಪಿ-ಜೆಡಿಎಸ್ ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಇರಲಿದೆ: ಹೆಚ್​ಡಿ ಕುಮಾರಸ್ವಾಮಿ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Mar 29, 2024 | 2:34 PM

ಬೆಂಗಳೂರು, ಮಾ.29: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಆದರೆ, ಈ ಮೈತ್ರಿಯು ತಾತ್ಕಾಲಿಕವಲ್ಲ ಎಂದು ಹೇಳಿರುವ ಹೆಚ್.​ಡಿ. ಕುಮಾರಸ್ವಾಮಿ (H.D.Kumaraswamy), ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಮುಂದುವರಿಯಲಿದೆ. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆಲುವು ಅಸಾಧ್ಯ ಎಂದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೂರನೇ ಬಾರಿ ಕೇಂದ್ರದಲ್ಲಿ ಸರ್ಕಾರ ರಚನೆ‌ ಮಾಡುವುದು ಎಷ್ಟು ಸತ್ಯವೋ, ಸೂರ್ಯ ಚಂದ್ರ ಹುಟ್ಟುವುದು ಅಷ್ಟೇ ಸತ್ಯ. ಬೂತ್ ಮಟ್ಟ, ಜಿಲ್ಲಾ ಮಟ್ಟದಲ್ಲಿ ಪರಸ್ಪರ ಸಂಶಯಕ್ಕೆ ಒಳಗಾಗದೇ ಕೆಲಸ ಮಾಡಬೇಕು. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ಕಾಂಗ್ರೆಸ್ ಬರಲು ಸಾಧ್ಯವಿಲ್ಲ ಎಂದರು.

ಮೈತ್ರಿಯಿಂದಾಗಿ ಕಾಂಗ್ರೆಸ್‌ಗೆ ಅಂದೇ ಭಯ ಶುರುವಾಗಿದೆ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಇನ್ನೂ ಮುಂದೆ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಇದು ರಾಜ್ಯದ ಅಭಿವೃದ್ಧಿ ಮೈತ್ರಿಯಾಗಿದೆ. ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕನಿಷ್ಠ 25 ಸಾವಿರ ಮತಗಳ ಲೀಡ್ ಕೊಡಿಸುತ್ತೇನೆ ಎಂದರು.

ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ನಮ್ಮ ಈ ಮೈತ್ರಿ ಕೃತಕವಾಗಿ ಸೃಷ್ಟಿಯಾಗಿಲ್ಲ. ಹಿಂದಿನ ಮೈತ್ರಿ ಸರ್ಕಾರದಲ್ಲಿ ಯಡಿಯೂರಪ್ಪ ಸಹಕಾರ ಕೊಟ್ಡಿದ್ದಕ್ಕೆ ಹಲವು ಒಳ್ಳೆಯ ಕೆಲಸ ಆಗಿದೆ. ಅದೇ ಮಾದರಿಯ ಸರ್ಕಾರ ಮತ್ತೆ ತರಬೇಕು, ಇದಕ್ಕೆ ಈ ಮೈತ್ರಿ ವೇದಿಕೆ ಆಗಬೇಕು. ಎರಡೂ ಪಕ್ಷಗಳಲ್ಲಿ ಬೂತ್ ಮಟ್ಟದಿಂದ ಸಮನ್ವಯತೆ ಸಾಧಿಸಲು ಪರಸ್ಪರ ಪಕ್ಷಗಳ ಬಾವುಟಗಳ ಬಳಕೆ ಮಾಡುತ್ತೇವೆ ಎಂದರು.

ಎರಡೂ ಪಕ್ಷಗಳ ಸಂಶಯಕ್ಕೆ ಒಳಗಾಗದೇ ಒಟ್ಟಾಗಿ ಹೋಗುತ್ತೇವೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ದರೆ ಉಸ್ತುವಾರಿಗಳ ಗಮನಕ್ಕೆ ತನ್ನಿ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶ ಇದೆ ಎಂದರು.

ಬೆಂಗಳೂರಿನಲ್ಲಿ ಬಿಜೆಪಿ-JDS​​ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಭಯ ಪಕ್ಷದ ಸಭೆ ಮಾಡಲು ಆಗಿರಲಿಲ್ಲ. ಆರೋಗ್ಯ ಸಮಸ್ಯೆಯಿಂದ ಈ ಸಭೆ ಮುಂದೂಡಲಾಗಿತ್ತು. ಎರಡೂ ಪಕ್ಷದಲ್ಲಿ ವಿಶ್ವಾಸದ ಮೂಲಕ ಕೆಲಸ ಆಗಬೇಕು. ನಮ್ಮ ಗುರಿ ಕರ್ನಾಟಕದಲ್ಲಿ 28 ಸ್ಥಾನಗಳನ್ನ ಗೆಲ್ಲುವುದಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Fri, 29 March 24

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ