ಅತ್ತ ರಾಜ್ಯಪಾಲರನ್ನ ಭೇಟಿಯಾದ BJP,JDS ಶಾಸಕರು: ಇತ್ತ ಥೀಮ್ ಪಾರ್ಕ್ ಅವ್ಯವಹಾರ SITಗೆ ನೀಡುವಂತೆ ಸಿಎಂಗೆ ಮನವಿ
ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ಮಾಡಿದ್ದು, ಕೆಕೆಆರ್ ಡಿಬಿ ವತಿಯಿಂದ ಶಾಸಕರುಗಳಿಗೆ ಆಗುತ್ತಿರುವ ತಾರತಮ್ಯದ ಬಗ್ಗೆ ಶಾಸಕರ ನಿಯೋಗ ಪತ್ರ ನೀಡಲಿದೆ. ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಕೇಸ್ ತನಿಖೆಗೆ SIT ರಚಿಸುವಂತೆ ಸಿಎಂಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.
ಬೆಂಗಳೂರು, ಜುಲೈ 23: ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashoka) ನೇತೃತ್ವದಲ್ಲಿ ಇಂದು ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ-ಜೆಡಿಎಸ್ (BJP-JDS) ಶಾಸಕರ ನಿಯೋಗದಿಂದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ರಾಜಭವನದಲ್ಲಿ ಭೇಟಿ ಮಾಡಿರುವ ಶಾಸಕರ ನಿಯೋಗ ಕೆಕೆಆರ್ಡಿಬಿಯಿಂದ 2 ಪಕ್ಷಗಳ ಶಾಸಕರಿಗೆ ಆಗುತ್ತಿರುವ ತಾರತಮ್ಯ ಬಗ್ಗೆ ರಾಜ್ಯಪಾಲರಿಗೆ ಪತ್ರ ನೀಡಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆ ರಾಜ್ಯಪಾಲರಿಗೆ ಬಿಜೆಪಿ ನಾಯಕರು ದೂರು ನೀಡಲು ಮುಂದಾಗಿದ್ದರು.
ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ!
ED ವಿರುದ್ಧ ದೂರು ನೀಡಿ ತನಿಖೆ ದಿಕ್ಕು ತಪ್ಪಿಸಲು ಯತ್ನ ಆರೋಪ ಮಾಡಿದ್ದು, ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡುಕೊಳ್ಳುತ್ತಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಸಾಧ್ಯತೆ ಕೂಡ ಇದೆ.
ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಆರೋಪ: SIT ರಚಿಸುವಂತೆ ಸಿಎಂಗೆ ಮನವಿ
ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಿರ್ಮಾಣವಾಗುತ್ತಿರುವ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ತನಿಖೆಗೆ ಎಸ್ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ನಿಯೋಗದಿಂದ ಮನವಿ ಮಾಡಲಾಗಿದೆ. ಈ ವೇಳೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ವಾಲ್ಮೀಕಿ ನಿಗಮ ಹಗರಣದ ಕಿಚ್ಚು, ಇಂದು ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನಪರಿಷತ್ ಒಳಗೂ ಇಡಿ ವಿರುದ್ಧ ನಿರ್ಣಯ ಕೈಗೊಳ್ಳುವ ಮಹತ್ವದ ಹೆಜ್ಜೆ ಒಂದನ್ನು ಇಟ್ಟಿದ್ದಾರೆ. ವಿಧಾನಪರಿಷತ್ ಒಳಗೂ ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣ ಸದ್ದು ಮಾಡಿದೆ. ನಿಯಮ 68 ರ ಅಡಿ ಚರ್ಚೆಗೆ ಅವಕಾಶ ನೀಡಬೇಕು ಅಂತ ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್, ಸಭಾಪತಿ ಹೊರಟ್ಟಿಗೆ ಲಿಖಿತ ಮನವಿ ಸಲ್ಲಿಸಿದರು. ಆದರೆ ಸಭಾಪತಿ ಹೊರಟ್ಟಿ ತಮ್ಮ ವಿವೇಚನಾ ಅಧಿಕಾರ ಬಳಸಿ ನಿಯಮಗಳ ಅಡಿ ಚರ್ಚೆಗೆ ಅವಕಾಶ ನೀಡಲಿಲ್ಲ, ಇದರಿಂದ ವಿಧಾನ ಪರಿಷತ್ ಒಳಗೂ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ದೊಡ್ಡ ಗದ್ದಲವೇ ನಡೆಯಿತು.
ಇದನ್ನೂ ಓದಿ: ವಾಲ್ಮೀಕಿ ಹಗರಣ: ಅಧಿಕಾರಿಗೆ ಒತ್ತಡ ಹೇರಿರುವ ಆರೋಪ, ಇಬ್ಬರು ಇಡಿ ಆಫೀಸರ್ ವಿರುದ್ಧ ಎಫ್ಐಆರ್
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳ ವಿರುದ್ಧ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್ ದೂರು ನೀಡಿದ್ದರು. ವಿಲ್ಸನ್ ಗಾರ್ಡನ್ ಠಾಣೆಗೆ ವರ್ಗಾವಣೆ ಬಳಿಕ ಎಫ್ಐಆರ್ ಕೂಡ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.