ಷಡ್ಯಂತ್ರದ ಭಾಗವಾಗಿರುವ ಡಿ.ಕೆ. ಶಿವಕುಮಾರ್ ಘನಂದಾರಿ ಕೆಲಸವನ್ನು ಸಮರ್ಥಿಸುತ್ತೀರಾ? ಕರ್ನಾಟಕ ಬಿಜೆಪಿ ಪ್ರಶ್ನೆ

ಇಂಥಹ ಹೀನ ಕೆಲಸ ನಿರ್ವಹಣೆ ಮಾಡುವುದಕ್ಕೆ ಕೆಪಿಸಿಸಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗಿದೆಯಾ? ಎಂದೂ ಕೇಳಿರುವ ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಸರಣಿ ಟ್ವೀಟ್​ಗಳಲ್ಲಿ ವಿರೋಧಿಸಿದೆ.

ಷಡ್ಯಂತ್ರದ ಭಾಗವಾಗಿರುವ ಡಿ.ಕೆ. ಶಿವಕುಮಾರ್ ಘನಂದಾರಿ ಕೆಲಸವನ್ನು ಸಮರ್ಥಿಸುತ್ತೀರಾ? ಕರ್ನಾಟಕ ಬಿಜೆಪಿ ಪ್ರಶ್ನೆ
ಡಿ.ಕೆ. ಶಿವಕುಮಾರ್
Follow us
TV9 Web
| Updated By: ganapathi bhat

Updated on:Apr 05, 2022 | 1:10 PM

ಬೆಂಗಳೂರು: ಕಳಂಕಿತರಿಂದ ಉತ್ತರ ಪಡೆಯುವುದಿಲ್ಲವೆಂದು ಸದನದ ಸಮಯವನ್ನು ಹಾಳುಗೆಡವಿದ ಕಾಂಗ್ರೆಸ್ ನಾಯಕರೇ, ಸಂತ್ರಸ್ಥೆಯೇ ಹೇಳಿದಂತೆ, ಷಡ್ಯಂತ್ರದ ಭಾಗವಾಗಿರುವ ಡಿ.ಕೆ. ಶಿವಕುಮಾರ್ ಮಾಡಿರುವ ಘನಂದಾರಿ ಕೆಲಸವನ್ನು ಸಮರ್ಥಿಸುತ್ತೀರಾ? ಎಂದು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ. ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಭಾರತೀಯ ಜನತಾ ಪಕ್ಷವು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಟ್ವೀಟ್ ದಾಳಿ ನಡೆಸಿದೆ.

ಇಂಥಹ ಹೀನ ಕೆಲಸ ನಿರ್ವಹಣೆ ಮಾಡುವುದಕ್ಕೆ ಕೆಪಿಸಿಸಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗಿದೆಯಾ? ಎಂದೂ ಕೇಳಿರುವ ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಸರಣಿ ಟ್ವೀಟ್​ಗಳಲ್ಲಿ ವಿರೋಧಿಸಿದೆ. ಇದೀಗಷ್ಟೇ ಸಿಡಿಯಲ್ಲಿದ್ದ ಯುವತಿಯ ಪೋಷಕರು ಮತ್ತು ಸಹೋದರರ ತನಿಖೆ ನಡೆದಿದೆ. ಎಸ್​ಐಟಿ ಅಧಿಕಾರಿಗಳು ಸಿಡಿ ಲೇಡಿ ಪೋಷಕರನ್ನು ವಿಚಾರಣೆ ನಡೆಸಿದ್ದಾರೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಶ್ಲೀಲ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೆಸರು ಕೂಡ ಕೇಳಿಬರುತ್ತಿದೆ. ಸಿಡಿಯಲ್ಲಿದ್ದ ಯುವತಿಯ ತಂದೆ-ತಾಯಿ ಎಸ್​ಐಟಿ ತನಿಖೆ ವೇಳೆ ಡಿ.ಕೆ. ಶಿವಕುಮಾರ್ ಹೆಸರನ್ನು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕಚೇರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ಸದಾಶಿವನಗರ ಠಾಣೆ ಪೊಲೀಸರಿಂದ ಡಿ.ಕೆ. ಶಿವಕುಮಾರ್ ಕಚೇರಿಗೆ ಹೆಚ್ಚುವರಿ ಬಂದೋಬಸ್ತ್ ಒದಗಿಸಲಾಗಿದೆ. ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ಗಳ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿ ರಮೇಶ್ ಜಾರಕಿಹೊಳಿ ನಿವಾಸದ ಹಿಂದಿನ ರಸ್ತೆಯಲ್ಲಿ ಡಿ.ಕೆ. ಶಿವಕುಮಾರ್ ನಿವಾಸವಿದೆ.

ಇದನ್ನೂ ಓದಿ: ಸಿಡಿ ಗ್ಯಾಂಗ್, ಡಿಕೆ ಶಿವಕುಮಾರ್ ಅವರಿಂದ ನಮ್ಮ ಮಗಳ ರಕ್ಷಿಸಿ; ಮಗಳ ಪ್ರಾಣಕ್ಕೇ ಅಪಾಯವಿದೆ: ಎಸ್​ಐಟಿ ಎದುರು ಕಣ್ಣೀರಾದ ಯುವತಿಯ ತಂದೆ-ತಾಯಿ

ಸಿಡಿ ಯುವತಿ ಪೋಷಕರ ಹೇಳಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ-ಕಚೇರಿಗೆ ಹೆಚ್ಚಿನ ಭದ್ರತೆ

Published On - 4:56 pm, Sat, 27 March 21

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ