ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ

ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು. ಹಾಗಾದ್ರೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ರು, ಏನೆಲ್ಲಾ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು ಎನ್ನುವ ಮಾಹಿತಿ ಇಲ್ಲಿದೆ.

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ
BJP Karnataka executive meeting
Edited By:

Updated on: Feb 19, 2026 | 10:13 PM

ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಫೆಬ್ರವರಿ 19) ನಡೆದ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಉದ್ಘಾಟಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮಾರೋಪ ಭಾಷಣ ಮಾಡಿದರು. ಇದೇ ವೇಳೆ ರಾಜಕೀಯ ಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾರ್ಯಕಾರಿಣಿಯಲ್ಲಿ ಸನ್ಮಾನಿಸಲಾಯಿತು. ಇನ್ನು ವಂದೇ ಮಾತರಂ ಗೀತೆಗೆ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾರ್ಯಕಾರಿಣಿಯಲ್ಲಿ 150 ಕಾರ್ಯಕರ್ತರಿಂದ ವಂದೇ ಮಾತರಂ ಗೀತೆ ಗಾಯನ ನಡೆಯಿತು‌.

ಇದನ್ನೂ ಓದಿ: BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ

ಆರು ನಿರ್ಣಯ ಮಂಡನೆ

.ರ್ನಾಟಕ ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನಸಭಾ ಉಪಚುನಾವಣೆಗಳ ಚಟುವಟಿಕೆಗಳು ಚುರುಕು‌ ಪಡೆಯುತ್ತಿರುವಂತೆಯೇ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿದ್ದು, ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ ಆರು ನಿರ್ಣಯಗಳನ್ನು ಮಂಡಿಸಲಾಗಿದೆ. ಸರ್ಕಾರದ ವೈಫಲ್ಯ, ಅಬಕಾರಿ ಹಗರಣ, ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ, ಒಳಮೀಸಲು ವರ್ಗೀಕರಣ ಅನ್ಯಾಯ, ಎ ಖಾತಾ, ಬಿ ಖಾತಾ ಮೂಲಕ ಭ್ರಷ್ಟಾಚಾರ, ಕಸದ ಅವ್ಯವಹಾರ ಸೇರಿ ಆರು ನಿರ್ಣಯಗಳನ್ನು ಮಂಡನೆ ಮಾಡಲಾಗಿದೆ.

 ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಹತ್ವದ ಸೂಚನೆ

ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರವನ್ನು ಸಮಾರೋಪದಲ್ಲಿ ಪ್ರಸ್ತಾಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಿ ಸಾರ್ವಜನಿಕ ಚರ್ಚೆಗೆ ಅವಕಾಶ ಕೊಡದಂತೆ ಸೂಚನೆ ನೀಡಿದರು. ಇದೇ ವೇಳೆ, ಕಾರ್ಯಕಾರಿಣಿ ಸಮಾರೋಪ ಭಾಷಣ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಮಾಹಿತಿ ನೀಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲು ಸಂಘಟನೆ ಮಾಡಬೇಕು ಎಂದು ಸೂಚಿಸಿದ್ದಾರೆ.

ಇನ್ನು ವಿಧಾನಪರಿಷತ್ ಪದವೀಧರ ಕ್ಷೇತ್ರಗಳ BJP ಅಭ್ಯರ್ಥಿಗಳು, ಶಿಕ್ಷಕರ ಕ್ಷೇತ್ರಗಳ BJP ಅಭ್ಯರ್ಥಿಗಳ ಪಟ್ಟಿ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಬೈಲೆಕ್ಷನ್​​ಗೂ ಶೀಘ್ರವೇ ಅಭ್ಯರ್ಥಿಗಳ ಘೋಷಣೆ ಮಾಡುವಂತೆ ಹೈಕಮಾಂಡ್​ಗೆ ಮನವಿ ಮಾಡಲು ಸಭೆಯಲ್ಲಿ ನಿರ್ಧರಿಲಾಗಿದೆ.

ಇದೇ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್ ಮಾತನಾಡಿ, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾರೂ ಬಹಿರಂಗವಾಗಿ ಮಾತಾಡಬಾರದು ಎಂದು ನಾಯಕರುಗಳೀಗೆ ಸೂಚಿಸಿದ್ದು, ಇದೇ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಶಿಕ್ಷಣ ಶಿಬಿರ, ಜಿಲ್ಲಾ, ಮಂಡಲ ಮಟ್ಟದಲ್ಲಿ ಪಕ್ಷದ ಸಭೆಗಳು ಮತ್ತು ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಲಾಯ್ತು.

ಒಟ್ನಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ಕಮಲ‌ಪಡೆಯ ನಾಯಕರು ಟಾರ್ಗೇಟ್ ಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಬಿಜೆಪಿಯಲ್ಲಿನ ಮೈತ್ರಿ ಅಪಸ್ವರದ ಬಗ್ಗೆ ಬ್ರೇಕ್ ಹಾಕುವುದಕ್ಕೂ ಕೇಂದ್ರ ಬಿಜೆಪಿ ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಸೂಚನೆ ನೀಡಲಾಗಿದ್ದು ,ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.