ಕೃಷಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ.. ಟ್ವೀಟ್ ಮೂಲಕ ಪ್ರತ್ಯುತ್ತರ ಕೊಟ್ಟ ಬಿಜೆಪಿ

| Updated By: ಸಾಧು ಶ್ರೀನಾಥ್​

Updated on: Jan 20, 2021 | 11:48 AM

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್, ಈಗ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೀವು ರೈತಪರ ಆಡಳಿತ ನಡೆಸಿದ್ರೆ ನಿಮ್ಮ ಅವಧಿಯಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿರಲಿಲ್ಲ ಅಲ್ಲವೇ? ಎಂದು ಟ್ವೀಟ್ ಮೂಲಕ ಬಿಜೆಪಿ ಕಾಂಗ್ರೆಸ್​ಗೆ ಪ್ರಶ್ನಿಸಿದೆ.

ಕೃಷಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ.. ಟ್ವೀಟ್ ಮೂಲಕ ಪ್ರತ್ಯುತ್ತರ ಕೊಟ್ಟ ಬಿಜೆಪಿ
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Follow us on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. 3 ಕೃಷಿ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಅನೇಕ ಕಡೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್​ ವಿರುದ್ಧ ವ್ಯಂಗ್ಯವಾಡಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್ಸಿನವರು, ಈಗ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೀವು ರೈತಪರ ಆಡಳಿತ ನಡೆಸಿದ್ರೆ ನಿಮ್ಮ ಅವಧಿಯಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿರಲಿಲ್ಲ ಅಲ್ಲವೇ? ಎಂದು ಪ್ರಶ್ನಿಸಿದೆ.

2013-14ರಲ್ಲಿ 104 ರೈತರು ಮೃತಪಟ್ಟಿದ್ದಾರೆ. 2014-15ರಲ್ಲಿ 128 ಮಂದಿ, 2015-16ರಲ್ಲಿ 1483 ಮಂದಿ. 2016-17 ರಲ್ಲಿ 1185 ಮಂದಿ. 2018-19 ರಲ್ಲಿ 900 ಮಂದಿ.. ಹೀಗೆ 3,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದ ವೇಳೆ ಕಣ್ಣೊರೆಸುವ ಬದಲು ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದೀರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ! ಎಂದು ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್‌ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯ ಮಾಡಿದೆ.

ಕಾಂಗ್ರೆಸ್​ನಿಂದ ರಾಜಭವನ ಚಲೋ.. ಟ್ರಾಫಿಕ್ ಜಾಮ್ ಸಮಸ್ಯೆ, ಪೊಲೀಸರಿಂದ ಪರ್ಯಾಯ ಮಾರ್ಗ