ಯಾವ ಶಾಸಕರ ಜೊತೆಯೂ ನಾಯಕತ್ವದ ಬಗ್ಗೆ ಚರ್ಚಿಸಿಲ್ಲ; ಕೊವಿಡ್ ನಿರ್ವಹಣೆ, ಪಕ್ಷ ಸಂಘಟನೆ ಬಗ್ಗೆ ತಿಳಿಸಲಾಗಿದೆ: ಅರುಣ್ ಸಿಂಗ್

ಇಂದು (ಜೂನ್ 17) ಬಿಜೆಪಿ ಶಾಸಕರು, ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಾಗಿದೆ. ಭೇಟಿಗೆ ಕಾಲಾವಕಾಶ ಕೋರಿದ್ದವರ ಜೊತೆ ಮಾತ್ರ ಚರ್ಚೆ ಮಾಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಯಾವ ಶಾಸಕರ ಜೊತೆಯೂ ನಾಯಕತ್ವದ ಬಗ್ಗೆ ಚರ್ಚಿಸಿಲ್ಲ; ಕೊವಿಡ್ ನಿರ್ವಹಣೆ, ಪಕ್ಷ ಸಂಘಟನೆ ಬಗ್ಗೆ ತಿಳಿಸಲಾಗಿದೆ: ಅರುಣ್ ಸಿಂಗ್
ಅರುಣ್ ಸಿಂಗ್
Follow us
TV9 Web
| Updated By: ganapathi bhat

Updated on:Jun 17, 2021 | 7:20 PM

ಬೆಂಗಳೂರು: ಕೊರೊನಾ ವೇಳೆ ಏನೇನು ಕೆಲಸ ಮಾಡಿದ್ದೀರೆಂದು ಪ್ರಶ್ನೆ ಮಾಡಲಾಗಿದೆ, ಌಂಬುಲೆನ್ಸ್​, ಆಸ್ಪತ್ರೆ ಸೇರಿದಂತೆ ವಿವಿಧ ಕೆಲಸಗಳ ಮಾಹಿತಿ ಪಡೆದಿದ್ದೇನೆ. ಪಕ್ಷ ಸಂಘಟನೆ ಬಗ್ಗೆ ಏನೇನು ಮಾಡಬೇಕೆಂದು ನಿರ್ದೇಶನ ನೀಡಿದ್ದೇನೆ ಎಂದು ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಶಾಸಕರಿಂದ ಅಭಿಪ್ರಾಯ ಸಂಗ್ರಹ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

ಇಂದು (ಜೂನ್ 17) ಬಿಜೆಪಿ ಶಾಸಕರು, ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಾಗಿದೆ. ಭೇಟಿಗೆ ಕಾಲಾವಕಾಶ ಕೋರಿದ್ದವರ ಜೊತೆ ಮಾತ್ರ ಚರ್ಚೆ ಮಾಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗದಿನದ ವೇಳೆ ಕಾರ್ಯಕ್ರಮ ನಡೆಸಲಿದ್ದೇವೆ. ಪ್ರಧಾನಿ ಗರೀಬ್​ ಕಲ್ಯಾಣ್​ ಯೋಜನೆ ಬಗ್ಗೆ ಪ್ರಶ್ನಿಸಿದ್ದೇನೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಕಾರ್ಯಗಳನ್ನು ಜನರಿಗೆ ತಲುಪಿಸಲು ಸಲಹೆ ನಿಡಲಾಗಿದೆ. ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್​ ಬಗ್ಗೆ ಕೇಳಿದ್ದೇನೆ. ಜೆಡಿಎಸ್​ ಲೆಕ್ಕಕ್ಕೇ ಇಲ್ಲ ಎಂದು ಶಾಸಕರು ಹೇಳಿದ್ದಾರೆ. ಕಾಂಗ್ರೆಸ್ ಆಂತರಿಕ ಜಗಳದಲ್ಲಿ ಮುಳುಗಿದೆ ಎಂದಿದ್ದಾರೆ. ಶಾಸಕರು ತಳಮಟ್ಟದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

ಯಾವ ಶಾಸಕರ ಜೊತೆಯೂ ನಾಯಕತ್ವದ ಬಗ್ಗೆ ಚರ್ಚಿಸಿಲ್ಲ. ಪಕ್ಷದಲ್ಲಿ ಇಬ್ಬರು ಮಾತ್ರ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗುತ್ತಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಲ್ಲ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅವರು ಹೊಸಬರು ಪಕ್ಷದ ಸಿದ್ಧಾಂತ ಗೊತ್ತಿಲ್ಲ ಎಂದಿದ್ದಾರೆ ಎಂದು ಹೇಳಿದ್ದಾರೆ.

ಹೊಸಬರು, ಅವರಿಗೆ ಪಕ್ಷದ ರೀತಿ ರಿವಾಜು ಗೊತ್ತಿಲ್ಲ. ಕಾರ್ಯಕರ್ತರ ಶ್ರಮದಿಂದ ಪಕ್ಷ ಈ ಮಟ್ಟಕ್ಕೆ ಬಂದಿದೆ. ಯಾರೋ ಒಂದಿಬ್ಬರ ಹೇಳಿಕೆಯಿಂದ ಪಕ್ಷಕ್ಕೆ ಧಕ್ಕೆಯಾಗ್ತಿದೆ. ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗುತ್ತಿದೆ. ಇಂತಹ ಒಂದಿಬ್ಬರ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಶಾಸಕ, ಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ರಾಜ್ಯ ಬಿಜೆಪಿ ಕಚೇರಿಯಿಂದ ಕುಮಾರಕೃಪಾ ಅತಿಥಿಗೃಹಕ್ಕೆ ಅರುಣ್ ಸಿಂಗ್ ತೆರಳಿದ್ದಾರೆ.

ಇಂದು ಅರುಣ್​ ಸಿಂಗ್​ರನ್ನು​ ಒಟ್ಟು 52 ಶಾಸಕರು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಪರ 36 ಶಾಸಕರಿಂದ ಅರುಣ್​ ಸಿಂಗ್ ಭೇಟಿಯಾಗಿದೆ. ತಟಸ್ಥ ಬಣದ 14 ಶಾಸಕರಿಂದ ಅರುಣ್​ ಸಿಂಗ್​ ಭೇಟಿ ಆಗಿದೆ. ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರೋಧಿ ಬಣದ ಇಬ್ಬರು ಶಾಸಕರು ಅರುಣ್ ಸಿಂಗ್ ಭೇಟಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಯಾರೋ ನನ್ನ ಮೊಬೈಲ್​ ಟ್ಯಾಪ್ ಮಾಡ್ತಿದ್ದಾರೆ, ಎಲ್ಲೇ ಹೋದರೂ ಕೆಲ ವ್ಯಕ್ತಿಗಳು ಹಿಂದೆ ಬರುತ್ತಾರೆ: ಅರವಿಂದ್ ಬೆಲ್ಲದ್ ಆರೋಪ

ಬಿ ಎಸ್ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್; ಯಾರೂ ಹಾದಿಬೀದಿಯಲ್ಲಿ ಮಾತಾಡಬಾರದು: ಸಿ ಟಿ ರವಿ

Published On - 7:04 pm, Thu, 17 June 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ