ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ: ಬಿವೈ ವಿಜಯೇಂದ್ರ ಮಾರ್ಮಿಕ ಮಾತು

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನವದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿನ ಪಕ್ಷದ ಆಂತರಿಕ ಸಮಸ್ಯೆಗಳು ಡಿಸೆಂಬರ್​ನಲ್ಲಿ ಬಗೆಹರಿಯಲಿವೆ ಎಂದಿದ್ದಾರೆ. ಬಣ ಜಗಳದ ಬಗ್ಗೆ ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ. ವಿಜಯೇಂದ್ರ ಮಾತಿನ ವಿವರ ಇಲ್ಲಿದೆ.

ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ: ಬಿವೈ ವಿಜಯೇಂದ್ರ ಮಾರ್ಮಿಕ ಮಾತು
ಬಿವೈ ವಿಜಯೇಂದ್ರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Nov 22, 2024 | 12:38 PM

ನವದೆಹಲಿ, ನವೆಂಬರ್ 22: ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ. ಆ ಬಳಿಕ ಪಕ್ಷದಲ್ಲಿ ಒಂದೇ ಬಾಗಿಲು ಆಗಲಿದೆ ಎಂದು ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದರು. ಪಕ್ಷದ ಹೈಕಮಾಂಡ್ ನಾಯಕರನ್ನು ಬೇಟಿಯಾಗಲು ನವದೆಹಲಿಗೆ ಬಂದಿರುವ ಅವರು, ಕರ್ನಾಟಕ ಬಿಜೆಪಿ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಸೇರಿದಂತೆ ಹಲವು ಮಂದಿ ನಾಯಕರು ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೆ ಅವರು ಈ ಹೇಳಕೆ ನೀಡಿದ್ದಾರೆ.

ವಕ್ಫ್ ವಿಚಾರವಾಗಿ ರಚಿಸಲಾಗಿದ್ದ ಬಿಜೆಪಿ ಸಮಿತಿಯಿಂದ ಆರಂಭದಲ್ಲಿ ಯತ್ನಾಳ್ ಹಾಗೂ ಅವರ ಬಣದ ಕೆಲವು ನಾಯಕರನ್ನು ಹೊರಗಿಡಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಒಟ್ಟು 3 ತಂಡಗಳನ್ನು ರಚಿಸಿ ಯತ್ನಾಳ್ ಬಣದ ನಾಯಕರಿಗೂ ಅವಕಾಶ ನೀಡಲಾಗಿತ್ತು.

ಚಾಡಿ ಹೇಳುವ ಕೆಲಸ ಮಾಡಲ್ಲ: ವಿಜಯೇಂದ್ರ

ಕರ್ನಾಟಕದಲ್ಲಿ ದೇವಾಲಯಗಳಿಗೂ ವಕ್ಫ್ ನೋಟಿಸ್ ನೀಡಿದ್ದಾರೆ. ವಕ್ಫ್​ ವಿರುದ್ಧ ಮೂರು ತಂಡ ಮಾಡಿ ಅಹವಾಲು ಸ್ವೀಕರಿಸುತ್ತಿದ್ದೇವೆ. ಹೈಕಮಾಂಡ್ ನಾಯಕರು ನನಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೆಹಲಿಗೆ ಬಂದು ಚಾಡಿ ಹೇಳುವ ಕೆಲಸವನ್ನು ನಾನು ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ನನ್ನ ವಿರುದ್ಧ ದೂರು ನೀಡುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಈಗಾಗಲೇ ಸೋಲೊಪ್ಪಿಕೊಳ್ಳುವ ಮಾತುಗಳನ್ನಾಡಿದ್ದಾರೆ. ಶಿಗ್ಗಾಂವಿಯಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಭರತ್ ಗೆಲ್ಲುತ್ತಾರೆ. ಸಂಡೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಜಯೇಂದ್ರ ಹೇಳಿದರು.

‘ಸಿದ್ದರಾಮಯ್ಯ ರಾಜೀನಾಮೆ ಸನ್ನಿಹಿತ’

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸನ್ನಿಹಿತವಾಗಿದೆ. ಅದನ್ನೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಜನರ ಕ್ಷಮೆ ಕೇಳಿ, ಅದನ್ನು ಬಿಟ್ಟು ಬಡವರಿಗೆ ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಈ ಆಡಳಿತ ವೈಖರಿಯಿಂದ ಶಾಸಕರು ದಂಗೆ ಏಳಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ, ಅಬಕಾರಿ ಹಗರಣ ಬೆಳಕಿಗೆ ಬಂದಿದೆ. ಲೋಕಾಯುಕ್ತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಭೈರತಿ ಸುರೇಶ್ ಹೆಲಿಕಾಪ್ಟರ್​ನಲ್ಲಿ ದಾಖಲೆ ಹೊತ್ತೊಯ್ದಿದ್ದಾರೆ. ದಾಖಲೆಗಳನ್ನು ಅಧಿಕಾರಿಗಳ ಮೂಲಕ ನಾಶಪಡಿಸಲಾಗಿದೆ. ದಾಖಲೆ ನಾಶ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಿದ್ದರು. ಲೋಕಾಯುಕ್ತರನ್ನು ಸಿಎಂ ಬಾಮೈದ ರಾತ್ರಿ ಭೇಟಿ ಮಾಡಿದ್ದಾರೆ. ಸಿಎಂ ಕ್ಲೀನ್​ಚಿಟ್​ ತೆಗೆದುಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ. ಶೀಘ್ರದಲ್ಲೇ ಕ್ಲೀನ್ ಚೀಟ್ ಸಿಗಲಿದೆ ಯಾವ ಅನುಮಾನ ಬೇಡ ಎಂದು ವಿಜಯೇಂದ್ರ ಟೀಕಿಸಿದರು.

ಇದನ್ನೂ ಓದಿ: ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

ಸರ್ಕಾರದ ಯಾವ ಯೋಜನೆಗಳು ಕೂಡ ಬಡವರಿಗೆ ತಲುಪುತ್ತಿಲ್ಲ. ಭಾಗ್ಯಲಕ್ಷ್ಮಿ ಯೋಜನೆಯ ಹಣವನ್ನು ನೀಡಲಾಗುತ್ತಿಲ್ಲ. ಹಾಲಿಗೆ ಸಬ್ಸಿಡಿ ಕೊಡುತ್ತಿಲ್ಲ. ನಬಾರ್ಡ್ ಹಣ ಕಡಿತ ಮಾಡಿದ್ದಾರೆ ಎಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ. ಎಲ್ಲಾ ಗೊತ್ತಿದ್ದೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Fri, 22 November 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ