JDS: ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ; ಬಿಜೆಪಿ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್

Karnataka Politics: ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

JDS: ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ; ಬಿಜೆಪಿ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 29, 2021 | 2:50 PM

ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಪ್ರಬಲ ರಾಜಕೀಯ ಶಕ್ತಿಯಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಮಗಳು ವಿಜೇತಾ ಟ್ವೀಟ್ ಮಾಡಿದ್ದಾರೆ. ರಾಜ್ಯ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಸಹ ಪ್ರಶ್ನಿಸಿರುವ ಅವರು, ಜಾತ್ಯತೀತ ಜನತಾದಳ ಪಕ್ಷ ರಾಜ್ಯದಲ್ಲಿ ಇನ್ನೂ ಬಲಿಷ್ಠವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ದಿವಂಗತ ಅನಂತಕುಮಾರ್ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿಯೂ ಹಲವು ಬಾರಿ ಆಯ್ಕೆಯಾಗಿದ್ದ ಅವರು ಕರ್ನಾಟಕವನ್ನು ಮತ್ತು ಬಿಜೆಪಿಯ ಕರ್ನಾಟಕ ಘಟಕವನ್ನು ದೆಹಲಿಯಲ್ಲಿ ಪ್ರತಿನಿಧಿಸುತ್ತಿದ್ದರು. ಅವರ ಮರಣಾನಂತರ ಅವರ ಪತ್ರಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಬಿಜೆಪಿಯ ಯುವ ನಾಯಕ ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿತ್ತು.

ಇದನ್ನೂ ಓದಿ: 

ಸಿಎಂ ಆದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಭೇಟಿ, ತಂದೆ-ತಾಯಿ ಸಮಾಧಿಗೆ ಗೌರವ ಸಮರ್ಪಣೆ

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ

(BJP leader Ananthakumar daughter Vijeta tweeted JDS is still the strongest in the state )

Published On - 2:40 pm, Thu, 29 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ